ಭದ್ರಾವತಿ ಸೀಗೇಬಾಗಿ ಬಸ್ ನಿಲ್ದಾಣದ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅಸ್ವಸ್ಥನಾಗಿ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಭದ್ರಾವತಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.
ಈತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ.
ಮೃತ ವ್ಯಕ್ತಿಯ ಚಹರೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕುರುಚಲು ಗಡ್ಡ ಹೊಂದಿರುತ್ತಾರೆ. ಮೈಮೇಲೆ ನೀಲಿ ಮತ್ತು ಬಿಳಿ ಬಣ್ಣದ ಚೌಕಳಿಯ ತುಂಬು ತೋಳಿನ ಶರ್ಟ್ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈತನ ವಾರಸುದಾರರ ಇದ್ದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.
