Wednesday, September 9, 2026
Wednesday, September 9, 2026

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Department of Handloom and Textile Technology ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರ ವತಿಯಿಂದ 2026-27 ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03 ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಸಾಲಿನಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು.
ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ:
Department of Handloom and Textile Technology ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳು
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳು
ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳು
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಸೀಟುಗಳು ಸೇರಿ ಒಟ್ಟು 39 ಸೀಟುಗಳು ಲಭ್ಯವಿರುತ್ತವೆ.
ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ವೆಬ್‌ಸೈಟ್ https://khtigadag.ac.in/AdmissionForm.pdf ನಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30.05.2026 ರೊಳಗಾಗಿ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102” ಇವರಿಗೆ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಗದಗ ಸಂಸ್ಥೆಯ ದೂರವಾಣಿ ಸಂಖ್ಯೆ: 9449162822 ಅಥವಾ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ , ದೂರವಾಣಿ ಸಂಖ್ಯೆ: 01812-223405 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...