B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೋಳೆ ಅವರೊಂದಿಗೆ ಮೀನುಗಾರರ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮೀನುಗಾರರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾದ ಸಬ್ಸಿಡಿ ಸೀಮೆಎಣ್ಣೆ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಈ ಹಿಂದೆಲೂ ಮೀನುಗಾರರ ಹಿತದೃಷ್ಟಿಯಿಂದ ಸೀಮೆಎಣ್ಣೆ ಪೂರೈಕೆಯ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಕೇಂದ್ರ ಸರ್ಕಾರವು ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆಗೆ ಕ್ರಮ ಕೈಗೊಂಡಿತ್ತು. ಕರಾವಳಿ ಭಾಗದ ಸಾವಿರಾರು ಮೀನುಗಾರ ಕುಟುಂಬಗಳ ಜೀವನೋಪಾಯಕ್ಕೆ ಸೀಮೆಎಣ್ಣೆ ಅತ್ಯಗತ್ಯವಾಗಿರುವುದರಿಂದ, ಅವರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು.
B.Y. Raghavendra ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಜೀವನೋಪಾಯ ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿ ನಿರಂತರವಾಗಿ ಶ್ರಮಿಸಲಾಗುವುದು.
