High Court ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗದಲ್ಲಿ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕೆಂಬ ನ್ಯಾಯಸಮ್ಮತ ಹೋರಾಟಕ್ಕೆ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಇಂದು ನಗರದ ವಕೀಲರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗೂ ಹೋರಾಟ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಹೋರಾಟಕ್ಕೆ ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಹಿರಿಯ ವಕೀಲರು ಗೌರವಾಧ್ಯಕ್ಷರು ಬಸಪ್ಪ ಗೌಡ್ರು ಶಿವಮೊಗ್ಗದಲ್ಲಿ ಸಂಚಾರಿ ಪೀಠಕ್ಕಾಗಿ ಹೆಚ್ಚಿನ ಬೆಂಬಲವನ್ನು ನೀಡಿದರು. ಹೆಚ್ಚಿನ ವಕೀಲರು ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷರಾದ ಜೆ ಸಿ ವಿಜಯಲಕ್ಷ್ಮಿ ಕದಂಬ ಅವರು, “ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗುವುದು ಇಂದಿನ ತುರ್ತು ಅಗತ್ಯವಾಗಿದೆ. ಇದರಿಂದ ಈ ಭಾಗದ ಜನರಿಗೆ ಮತ್ತು ವಕೀಲರಿಗೆ ಕಾಲಹರಣ ಹಾಗೂ ಆರ್ಥಿಕ ಹೊರೆ ತಪ್ಪಲಿದ್ದು, ಶೀಘ್ರ ನ್ಯಾಯ ಸಿಗಲು ಸಹಕಾರಿಯಾಗಲಿದೆ. ಈ ಪವಿತ್ರ ಹೋರಾಟಕ್ಕೆ ನಮ್ಮ ಸಂಸ್ಥೆಯು ಸದಾ ಬೆಂಬಲವಾಗಿ ನಿಲ್ಲಲಿದೆ” ಎಂದು ತಿಳಿಸಿದರು.
“ನ್ಯಾಯದಾನ ಪ್ರಕ್ರಿಯೆ ಜನಸಾಮಾನ್ಯರ ಸನಿಹಕ್ಕೆ ಬರಬೇಕು. ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವವರೆಗೂ ನಮ್ಮ ಬೆಂಬಲ ಮುಂದುವರಿಯುತ್ತದೆ.”
High Court ಕಾರ್ಯಕ್ರಮದಲ್ಲಿ ಸಂಸ್ಥೆಯ ಪೂರ್ವ ಅಧ್ಯಕ್ಷರಾದ (ಪಾಸ್ಟ್ ಪ್ರೆಸಿಡೆಂಟ್) ಪ್ರಮುಖರಾದ ಜೆ ಸಿ ಉದಯ ಕದಂಬ, ಜೆ ಸಿ ಕಾಟನ್ ಜಗದೀಶ್ ಜೆಸಿ ಸತೀಶ್ ಕುಮಾರ್ ಎಸ್ ಎಸ್ ಜೆ ಸಿ ಸಾಫ್ಟ್‌ವೇರ್ ಜಗದೀಶ್ ಸೇರಿದಂತೆ ನಗರದ ಜೆಸಿಐ ಸಂಸ್ಥೆಯ ಹಲವಾರು ಹಿರಿಯ ಹಾಗೂ ಕಿರಿಯ ಜೆಸಿ ಬಾಂಧವರು ಪಾಲ್ಗೊಂಡು ವಕೀಲರ ಹೋರಾಟಕ್ಕೆ ಸಾಥ್ ನೀಡಿದರು.
