Wednesday, September 9, 2026
Wednesday, September 9, 2026

ಮಂಡಗದ್ದೆ ಸಮೀಪದ ಕಣಗಲಕೊಪ್ಪದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ : ಹಿಡಿದು ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

Date:

ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ 17ನೇ ಮೈಲಿಗಲ್ಲಿನ ಸಮೀಪದ ಮನೆಯೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು.

ಮಾಹಿತಿ ತಿಳಿದ ತಕ್ಷಣ ಉರಗ ತಜ್ಞ ಸ್ನೇಕ್ ಕಿರಣ್ ಸ್ಥಳಕ್ಕೆ ಧಾವಿಸಿ ಯಶಸ್ವಿಯಾಗಿ ಹಾವನ್ನು ರಕ್ಷಣೆ ಮಾಡಿದ್ದಾರೆ.

ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ ಮನೆಯೊಂದರ ಸೌದೆ ಬಲೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮನೆಯವರು ಆತಂಕಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅರಣ್ಯಾಧಿಕಾರಿಗಳ ಸೂಚನೆಯ ಮೇರೆಗೆ ಉರಗ ತಜ್ಞ ಸ್ನೇಕ್ ಕಿರಣ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ನಿಮಿಷಗಳ ಕಾರ್ಯಾಚರಣೆಯ ಬಳಿಕ ಸುಮಾರು 15 ಅಡಿ ಉದ್ದ ಹಾಗೂ 8.5 ಕೆಜಿಗೂ ಅಧಿಕ ತೂಕವಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...