Wednesday, September 9, 2026
Wednesday, September 9, 2026

ಬಸ್ಸು ಮತ್ತು ಬೈಕ್ ಢಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

Date:

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಆತಂಕ ಮೂಡಿಸಿದೆ.


ಶಿವಮೊಗ್ಗ ತಾಲೂಕಿನ ಸುತ್ತುಕೋಟೆಯ ಶ್ರೀ ಸಪ್ತಕೋಟಿ ಪೆಟ್ರೋಲ್ ಬಂಕ್‌ ಸಮೀಪ ಈ ದುರ್ಘಟನೆ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ, ಶಿವಮೊಗ್ಗದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಬೈಕ್‌ ನೇರವಾಗಿ ಬಸ್ಸಿನ ರೇಡಿಯೇಟರ್ ಭಾಗಕ್ಕೆ ಗುದ್ದಿ ಅಲ್ಲಿ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕಿನಲ್ಲಿದ್ದ ಸವಾರರ ದೇಹಗಳಿಗೂ ಬೆಂಕಿ ತಗುಲಿರುವುದು ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ.

ಘಟನೆಯಲ್ಲಿ 23 ವರ್ಷದ ಅಬ್ನಾನ್‌ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದೇ ವೇಳೆ ಬಸ್‌ನೊಳಗಿದ್ದ ಪ್ರಯಾಣಿಕರು ಬೆಂಕಿ ಕಾಣುತ್ತಿದ್ದಂತೆಯೇ ಆತಂಕಕ್ಕೊಳಗಾಗಿ, ಎಮರ್ಜನ್ಸಿ ಡೋರ್ ಹಾಗೂ ಕಿಟಕಿಗಳ ಮೂಲಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ಸವಳಂಗ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಡಿವೈಎಸ್‌ಪಿ ಸಂಜೀವ್ ಕುಮಾರ್‌, ಕುಂಸಿ ಠಾಣೆಯ ಪಿಎಸ್‌ಐ ಪಾರ್ವತಿ ಬಾಯಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...