Friday, May 29, 2026
Friday, May 29, 2026

Karnataka State Legal Services Authority ಮೇ 30. ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಮತ್ತು ಆರೋಗ್ಯ ತಪಾಸಣಾ ಶಿಬಿರ

Date:

Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮೇ.30ರ ಬೆಳಗ್ಗೆ 9.30 ಕ್ಕೆ ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಗ್ರಂಥಪಾಲಕರುಗಳಿಗೆ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್‌ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು
ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳಾದ ವೆಂಕಟೇಶ್ ನಾಯ್ಕ್ ಟಿ.ರವರು ಕಾರ್ಯಕ್ರಮದ ಘನ ಉಪಸ್ಥಿತಿ‌ ವಹಿಸುವರು.
Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಶಶಿಧರ ಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ. ಮಂಜುನಾಥ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಎನ್.ಜಯದೇವ ನಾಯ್ಕ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕರಾದ ಎನ್.ರಾಜು, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಮತ್ತು ಅಧಿಕಾರಿಗಳು, ಮುಖಂಡರು ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ‌ ಆಹ್ವಾನ

Backward Classes Welfare Department 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ...

Friends Center ಐತಿಹಾಸಿಕ,ಪಾರಂಪರಿಕ ಸ್ಥಳಗಳಿಗೆ ಪ್ರವಾಸ:ಅನೇಕ ವಿಷಯಗಳ ಪರಿಚಯ,- ಬಿ.ಜಿ.ಧನರಾಜ್.

Friends Center ಐತಿಹಾಸಿಕ ಹಿನ್ನೆಲೆ ಹೊಂದಿರುವ ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡುವುದರಿಂದ,...

B.Y. Raghavendra ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಬೃಹತ್ ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ.

B.Y. Raghavendra ನಮ್ಮ ಭಾಗದ ಸಂಪರ್ಕ ಕ್ರಾಂತಿಗೆ ಅತ್ಯಂತ ನಿರ್ಣಾಯಕವಾಗಿರುವ ರಾಷ್ಟ್ರೀಯ...