Thursday, September 10, 2026
Thursday, September 10, 2026

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Date:

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ ಜಾಗದ ವಿವಾದ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಆರು ಮಂದಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಮೇ 27ರಂದು ಬೆಳಿಗ್ಗೆ ಸುಮಾರು 8.15ರ ವೇಳೆಗೆ ಈ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಅಮೂಲ್ಯ ಅವರು ಪ್ರಶ್ನೆ ಮಾಡಿದ ಹಿನ್ನೆಲೆ ಗಲಾಟೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ದೂರಿನ ಪ್ರಕಾರ, ಇದೇ ವೇಳೆ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ಆರೋಪಿಗಳು ಏಕಾಏಕಿ ಜಗಳಕ್ಕೆ ಮುಂದಾಗಿದ್ದಾರೆ. ಆರೋಪಿಗಳಾದ ಮಂಜುನಾಥ್, ಚಂದ್ರಶೇಖರ, ಜಯಮ್ಮ, ಲೋಲಮ್ಮ, ಸೀಮಾ ಹಾಗೂ ಮತ್ತೋರ್ವ ಚಂದ್ರಶೇಖರ ಒಟ್ಟಾಗಿ ಅಮೂಲ್ಯ ಮತ್ತು ಅವರ ಪತಿ ಶಿವಶಂಕರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Breaking News ದಂಪತಿಯನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ಥಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯ ಪರಿಣಾಮ ಶಿವಶಂಕರ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಮುಂದಿನ ದಿನಗಳಲ್ಲಿ ಪ್ರಾಣ ತೆಗೆಯುವುದಾಗಿ ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...