Thursday, September 10, 2026
Thursday, September 10, 2026

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Date:

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಅಕ್ರಮ ಮರಳುಗಾರಿಕೆ ಕುರಿತು ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆ, ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 15 ಸದಸ್ಯರ ಲೋಕಾಯುಕ್ತ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Department of Mining Geology ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಡಲಾಗಿದ್ದ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸ್ಥಳೀಯ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿದರು.

ಇದೇ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿದ ತಂಡ, ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು.

ಕಾರ್ಯಾಚರಣೆಯ ವೇಳೆ ವಿಐ, ಆರ್‌ಐ, ತಹಸೀಲ್ದಾರ್, ಎಸಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ, ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...