District Legal Services Authority ಯುವಜನತೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು, ಚಟಗಳನ್ನಲ್ಲ. ತಾತ್ಕಾಲಿಕ ಸಂತೋಷಕ್ಕಿAತ ಶಾಶ್ವತ ಸಂತೋಷವನ್ನು ತಮ್ಮದಾಗಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸುಬ್ಬಯ್ಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಡಳಿತ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರೌಢಾವಸ್ಥೆಯಲ್ಲಿ ಯುವಜನತೆ ಕೆಲವು ಆಕರ್ಷಣೆಗಳಿಗೆ ಒಳಗಾಗಿ ಅಥವಾ ಮತ್ಯಾವುದೋ ಒತ್ತಡಕ್ಕೆ ಮಣಿದು ದುಶ್ಚಟಗಳಿಗೆ ಬೀಳುವ ಸಾಧ್ಯತೆ ಇರುತ್ತದೆ. ಆದರೆ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ, ಉತ್ತಮ ಪುಸ್ತಕಗಳನ್ನು ಓದುವುದು, ಸಂಗೀತ ಕೇಳುವುದು ಈ ರೀತಿಯ ಉತ್ತಮ ಹವ್ಯಾಸಗಳನ್ನು ತಮ್ಮದಾಗಿಸಿಕೊಳ್ಳಬೇಕು. ಎಷ್ಟೋ ಜನರು ದುಶ್ಚಟಗಳಿಗೆ ಬಲಿಯಾಗಿ ತೀವ್ರವಾಗಿ ಹಾಳಾಗಿರುವುದನ್ನು ಕಂಡಿದ್ದೇವೆ. ಆದ್ದರಿಂದ ದುಶ್ಚಟಗಳಿಂದ ದೂರ ಇರಬೇಕು.
ಸಿನೆಮಾ ಮೊದಲಿಗೆ ಬರುವ ಜಾಹಿರಾತನ್ನು ನೋಡಬೇಕು. ಚಟದಿಂದಾಗುವ ಪರಿಣಾಮವನ್ನು ಪ್ರತಿ ಚಲನಚಿತ್ರದ ಮೊದಲಿಗೆ ತೋರಿಸಲಾಗುತ್ತದೆ ಎಂದ ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಯುವ ಪೀಳಿಗೆಗೆ ಪರಿಣಾಮಕಾರಿಯಾಗಿ ಅರಿವನ್ನು ಮೂಡಿಸಬೇಕಿದೆ ಎಂದರು.
ಡಿಹೆಚ್‌ಓ ಡಾ.ನಟರಾಜ್ ಕೆ ಎಸ್ ಮಾತನಾಡಿ, ತಂಬಾಕು ಸೇವನೆ ಅತ್ಯಂತ ಮಾರಕವಾಗಿದ್ದು, ಕ್ಯಾನ್ಸರ್, ಹೃದಯ, ಶ್ವಾಸ ಸಂಬAಧಿ ಇತ್ಯಾದಿ ಮಾರಣಾಂತಿಕ ಕಾಯಿಲೆಗಳು ಬರುತ್ತವೆ. ಧೂಮಸಹಿತ ತಂಬಾಕು ವಸ್ತುಗಳಲ್ಲಿ 7000 ರಾಸಾಯನಿಕ ವಸ್ತುಗಳಿದ್ದು ಇದರಲ್ಲಿ 69 ರಷ್ಟು ಕ್ಯಾನ್ಸರ್‌ಕಾರಕ ವಸ್ತುಗಳಾಗಿವೆ.
ಪ್ರತಿ ವರ್ಷ ವಿಶ್ವವಿದ್ಯಾದಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆ ಕಾರಣದಿಂದ ಮರಣ ಹೊಂದುತ್ತಿದ್ದಾರೆ. ಪ್ರತಿ 6 ಸೆಕೆಂಡಿಕೆ ಒಂದು ಸಾವು ಸಂಭವಿಸುತ್ತಿದೆ. ಆದ್ದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ.
ಕೆಟ್ಟ ಅಭ್ಯಾಸಗಳು ಬೇಗ ಅಂಟಿಕೊಳ್ಳುತ್ತವೆ. ಆರಂಭದಲ್ಲಿ ಖುಷಿಗಾಗಿ ಶುರುವಾದ ತಂಬಾಕು ಸೇವನೆ ಬರ ಬರುತ್ತಾ ಚಟವಾಗುವ ಕಾರಣ ಮುಖ್ಯವಾಗಿ ಯುವ ಪೀಳಿಗೆಯನ್ನು ಇದರಿಂದ ದೂರ ಇಡಲು ಶ್ರಮಿಸಬೇಕಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಮಾತನಾಡಿ, ತಂಬಾಕು ಸೇವನೆ ಅತ್ಯಂತ ಮಾರಕವಾಗಿದೆ. ಕೋಟ್ಪಾ ಕಾಯ್ದೆಯ ಸೆಕ್ಷನ್ 6 ರ ಪ್ರಕಾರ ತಂಬಾಕು ಉತ್ಪನ್ನಗಳನ್ನು ಅಪ್ರಾಪ್ತ ವಯಸ್ಕರಿಗೆ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ. ಹಾಗೂ ಸೆಕ್ಷನ್ 6ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ನಾಮಫಲಕವನ್ನು ಕಡ್ಡಾಯವಾಗಿ ಸಂಸ್ಥೆಯ ಮುಂದೆ ಪ್ರದರ್ಶನ ಮಾಡಬೇಕು. ಶಿಕ್ಷಣ ಸಂಸ್ಥೆ ಸುತ್ತಮುತ್ತ ತಂಬಾಕು ಮಾರಾಟ ಮಾಡುವುದು ಕಂಡುಬAದಲ್ಲಿ ಪಬ್ಲಿಕ್ ಐ ವಾಟ್ಸಾಪ್ ಸಂಖ್ಯೆ : 8277982900 ತಿಳಿಸಬಹುದು ಅಥವಾ 1098 ಗೆ ವಿದ್ಯಾರ್ಥಿಗಳು ಕರೆ ಮಾಡಿ ತಿಳಿಸಬಹುದು ಎಂದರು.
District Legal Services Authority ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಗೀತಾ ಎಮ್ ಮಾತನಾಡಿ, ತಂಬಾಕು ಸೇವೆನೆ ಮಹಿಳೆ ಮತ್ತು ಪುರುಷರಿಬ್ಬರಿಗೂ ಮಾರಕವಾಗಿದ್ದು, ತಂಬಾಕು ಸೇವನೆ ಮಾಡುವ ಮಹಿಳೆಯರಲ್ಲಿ ಬಂಜೆತನ, ಗರ್ಭಧಾರಣೆಯಲ್ಲಿ ಸಮಸ್ಯೆಗಳು, ಬಾಯಿಯ ಕ್ಯಾನ್ಸರ್ ಬರಬಹುದು ಹಾಗೂ ಪುರುಷರಲ್ಲಿ ಸಹ ನಪುಂಸಕತೆ ಕಂಡು ಬರುವ ಸಾಧ್ಯತೆ ಇದ್ದು, ಇಡೀ ಕುಟುಂಬವೇ ಸಂಕಷ್ಟಕ್ಕೀಡಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಎಲ್ಲರೂ ತಂಬಾಕು ಸೇವನೆಯಿಂದ ದೂರು ಇರಬೇಕು ಎಂದರು.
ಈ ಬಾರಿ ‘ಆಕರ್ಷಣೆಯ ಮುಖವಾಡವನ್ನು ಕಳಚುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ವಿಶೇಷ ಘೋಷವಾಕ್ಯದೊಂದಿಗೆ ಈ ಜಾಥಾ ಕಾರ್ಯಕ್ರಮ ನಡೆಯಿತು.
ಜಾಥಾದಲ್ಲಿ ಎಎಸ್‌ಪಿ ಕಾರಿಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ್ ನಾಯ್ಕ್ ಎಲ್, ಬಾಯಿಯ ಆರೋಗ್ಯದ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ.ಮೋಹನ್, ಟಿಹೆಚ್‌ಓ ಡಾ.ಚಂದ್ರಶೇಖರ್, ಡಾ.ರವೀಶ್, ಡಾ.ಸತೀಶ್ ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಿಮ್ಸ್ ಮತ್ತು ಸುಬ್ಬಯ್ಯ ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿದ್ದರು.
District Legal Services Authority ಯುವಜನತೆ ಮನಸ್ಸು ನಿಯಂತ್ರಿಸಿ, ದುಶ್ಚಟಗಳಿಂದ ದೂರವಿರಬೇಕು- ನ್ಯಾ.ಜಿ.ಎ.ಮಂಜುನಾಥ್
Date:
