Saturday, June 6, 2026
Saturday, June 6, 2026

World Environment Day ಹೆಚ್ಚು ಮರಗಳನ್ನ ಬೆಳೆಸಿ ಪರಿಸರ ಸಮತೋಲನ ಕಾಪಾಡಬೇಕು -ರಿತೇಶ್ ಜೋಷಿ.

Date:

World Environment Day ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026 ರಂದು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ಕಾರ್ಖಾನೆಯ ಆವರಣದಲ್ಲಿ ವಿವಿಧ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಬೆಳಿಗ್ಗೆಯೇ ಚಾಲನೆ ದೊರೆತಿದ್ದು, ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀ ಶ್ರೀವತ್ಸನ್, ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಶ್ರೀ ಎಂ.ಜಿ. ನಾಗರಾಜ್, ಕಾರ್ಪೊರೇಟ್ ಹೆಡ್ ಆಫೀಸ್‌ನ ಮಾನವ ಸಂಪನ್ಮೂಲ ವಿಭಾಗದ ಸಿ.ಎಚ್.ಆರ್.ಓ ಶ್ರೀ ರಿತೇಶ್ ಜೋಶಿ, ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳು ಒಟ್ಟಾಗಿ ಸೇರಿ ಕಾರ್ಖಾನೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಸಾಯಂಕಾಲ 4.00 ಗಂಟೆಗೆ ಕಾರ್ಖಾನೆಯ ಆಡಿಟೋರಿಯಂನಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಪ್ಪಳ ಪರಿಸರ ಇಲಾಖೆಯ ಹಿರಿಯ ಸಹಾಯಕ ಪರಿಸರ ಅಧಿಕಾರಿಗಳಾದ ಶ್ರೀ ಮುರುಳೀಧರ್ ಅವರು ಭಾಗವಹಿಸಿ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಹವಾಮಾನ ಬದಲಾವಣೆಯ ಸವಾಲುಗಳ ಕುರಿತು ಸಮಗ್ರವಾಗಿ ಮಾತನಾಡಿದರು. ಕೈಗಾರಿಕೆಗಳು ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಶ್ರೀ ಎಂ.ಜಿ. ನಾಗರಾಜ್, ಹೆಚ್ ಆರ್ ಎಂ ವಿಭಾಗದ ಉಪಾಧ್ಯಕ್ಷರು ಶ್ರೀ ಶಿವಯ್ಯ ಸ್ವಾಮಿ ಹಾಗೂ ಮುಖ್ಯ ಅತಿಥಿ ಶ್ರೀ ಮುರುಳೀಧರ್ ಉಪಸ್ಥಿತರಿದ್ದು ಪರಿಸರದ ಉನ್ನತಿ, ಕೈಗಾರಿಕಾ ಅಭಿವೃದ್ಧಿ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಕಾರ್ಯಕ್ರಮವಾಗಿರದೆ ಪ್ರತಿಯೊಬ್ಬರ ಜೀವನ ಶೈಲಿಯ ಭಾಗವಾಗಬೇಕು ಎಂದು ಅವರು ಕರೆ ನೀಡಿದರು.

World Environment Day ಪರಿಸರ ದಿನಾಚರಣೆಯ ಅಂಗವಾಗಿ ಸಿಬ್ಬಂದಿ ಹಾಗೂ ಕಾರ್ಮಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲೆ, ಪ್ರಬಂಧ, ಘೋಷಣೆ ಮತ್ತು ಪೋಟೋಗ್ರಾಫಿ ಸ್ಪರ್ಧೆಯ ವಿಜೇತರಾದವರಿಗೆ ವೇದಿಕೆಯಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.

ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೋಪ್ಪಳ ತಾಲ್ಲೂಕಿನ ಅತ್ಯಧಿಕ ಅಂಕ ಗಳಿಸಿದ ಎಂಟು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸನ್ಮಾನಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಪ್ರೋತ್ಸಾಹ ನೀಡಿತು.

ಕಾರ್ಯಕ್ರಮದಲ್ಲಿ ಕಾರ್ಮಿಕರು ಮುಖಂಡರು, ಕಾರ್ಮಿಕರು, ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಹಸಿರು ಪರಿಸರ ನಿರ್ಮಾಣ, ಮಾಲಿನ್ಯ ನಿಯಂತ್ರಣ ಮತ್ತು ಪ್ರಕೃತಿ ಸಂಪನ್ಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂಬ ಸಂದೇಶದೊಂದಿಗೆ ವಿಶ್ವ ಪರಿಸರ ದಿನಾಚರಣೆ-2026 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಮುರುಳೀಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ...