Wednesday, September 9, 2026
Wednesday, September 9, 2026

JCI Shimoga ಪರಿಸರವನ್ನ ನಾವು ರಕ್ಷಿಸಿದರೆ,ಅದು ನಮ್ಮನ್ನ ರಕ್ಷಿಸುತ್ತದೆ- ವಿಜಯಲಕ್ಷ್ಮೀ ಕಡಂಬ

Date:

JCI Shimoga ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಜೆಸಿಐ ಶಿವಮೊಗ್ಗ ವಿವೇಕ್ ಅಧ್ಯಕ್ಷೆ ವಿಜಯಲಕ್ಷ್ಮೀ ಕಡಂಬ ಹೇಳಿದರು.
ಜೆಸಿಐ ಶಿವಮೊಗ್ಗ ವಿವೇಕ್ ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಕಲ್ಲಿಹಾಳ್‌ನಲ್ಲಿ ಇರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿರುವುದನ್ನು ನಾವೆಲ್ಲರೂ ಕಾಣುತ್ತಿದ್ದೇವೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೂರಕವಾದ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯ ಪೂರ್ವ ಅಧ್ಯಕ್ಷ ಡಾ. ನಾಗರಾಜ್ ಪರಿಸರ ಅವರು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಅತ್ಯಂತ ಸರಳ ಹಾಗೂ ಪ್ರಭಾವಶಾಲಿಯಾಗಿ ಮನವರಿಕೆ ಮಾಡಿಕೊಟ್ಟರು.
JCI Shimoga ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಯ ಮ್ಯಾನೇಜ್‌ಮೇಂಟ್ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳೊಂದಿಗೆ ಜೊತೆಗೂಡಿ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪ್ರತಿಯೊಬ್ಬರಿಗೂ ಪರಿಸರದ ಮಹತ್ವದ ಬಗ್ಗೆ ತಿಳಿಸಲಾಯಿತು.
ಕಲ್ಲಿಹಾಳ್ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಪಂಕಜಾ, ಜೆಸಿಐ ಶಿವಮೊಗ್ಗ ವಿವೇಕ್ ಸದಸ್ಯರು ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಪದಾಧಿಕಾರಿಗಳು, ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...