Thursday, July 23, 2026
Thursday, July 23, 2026

VISL ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳ ಶೈಕ್ಷಣಿಕ ಮತ್ತು ವೃತ್ತಿಪರ ಜೀವನವು ಯಶಸ್ವಿಯಾಗಲಿ- ಅನುಪ್ ಕುಮಾರ್

Date:

VISL ವಿಐಎಸ್‌ಎಲ್ ಉದ್ಯೋಗಿಗಳ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ
ಸೈಲ್ ಸಂಸ್ಥೆಯು ತನ್ನ ಉದ್ಯೋಗಿಗಳ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಂಪ್ರದಾಯವನ್ನು ರೂಡಿಸಿಕೊಂಡು ಬರುತ್ತಿದ್ದು, ಅದರ ಅಂಗವಾಗಿ, ಸೈಲ್-ವಿಐಎಸ್‌ಎಲ್ ವತಿಯಿಂದ 2026ರ ಜೂನ್ 05ರಂದು ಭದ್ರಾವತಿಯ ಭದ್ರಾ ಅತಿಥಿಗೃಹದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೊಜಿಸಲಾಗಿತ್ತು.

2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ (೧೦ನೇ ತರಗತಿ) ಮತ್ತು ದ್ವಿತೀಯ ಪಿ.ಯು.ಸಿ (12ನೇ ತರಗತಿ) ಪರೀಕ್ಷೆಯಲ್ಲಿ 90% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿಐಎಸ್‌ಎಲ್ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಒಟ್ಟು ಹತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವು ಸಾಂಪ್ರದಾಯಿಕವಾಗಿ ಜ್ಯೋತಿ ಬೆಳಗುವ ಮೂಲಕ ಆರಂಭವಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಅನುಪ್ ಕುಮಾರ್, ಕಾರ್ಯಪಾಲಕ ನಿರ್ದೇಶಕರು, ಸೈಲ್-ವಿಐಎಸ್‌ಎಲ್, ವಿದ್ಯಾರ್ಥಿಗಳ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ, ಪ್ರಶಂಸಾ ಪತ್ರಗಳು ಹಾಗೂ ನಗದು ಬಹುಮಾನಗಳನ್ನು ವಿತರಿಸಿದರು.

VISL ಜೊತೆಗೆ ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಅಮೃತ್ ಕುಮಾರ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಸೇರಿದಂತೆ, ವಿಐಎಸ್‌ಪಿಯ ಹಿರಿಯ ಅಧಿಕಾರಿಗಳು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಸದಸ್ಯರು, ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊಂಡು, ತಮ್ಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಸೈಲ್-ವಿಐಎಸ್‌ಎಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಶ್ರೀ ನವೀನ್ ರಾಹುಲ್, ಸಹಾಯಕ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...