Monday, September 21, 2026
Monday, September 21, 2026

Shivamogga News ಅಲಗೇರಿ ಮಂಡ್ರಿಯ ಶಾಲೆಯ ಕಟ್ಟಡ ಶಿಥಿಲ: ಇಲಾಖೆ & ಜನಪ್ರತಿನಿಧಿಗಳ ಜಾಣಮೌನ.

Date:

Shivamogga News ಶಾಲೆ ಎಂದರೆ ಮಕ್ಕಳ ಭವಿಷ್ಯ ರೂಪುಗೊಳ್ಳುವ ದೇವಾಲಯ. ಆದರೆ ಶಿವಮೊಗ್ಗ ಜಿಲ್ಲೆಯ ಈ ಸರ್ಕಾರಿ ಶಾಲೆಯ ಸ್ಥಿತಿ ನೋಡಿದರೆ ಪೋಷಕರು ಮತ್ತು ಮಕ್ಕಳು ಪ್ರತಿದಿನ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಸುಮಾರು 59 ವರ್ಷಗಳ ಹಳೆಯ ಈ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರೂ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳು ಮಾತ್ರ ಮೌನ ವಹಿಸಿದ್ದಾರೆ.

ಇದು ಶಿವಮೊಗ್ಗ ಜಿಲ್ಲೆಯ ಅಲಗೇರಿಮಂಡ್ರಿ ಸರ್ಕಾರಿ ಪ್ರಾಥಮಿಕ ಶಾಲೆ…

ಒಮ್ಮೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಲರವದಿಂದ ಕಂಗೊಳಿಸುತ್ತಿದ್ದ ಈ ಶಾಲೆ ಇಂದು ಶಿಥಿಲಗೊಂಡ ಕಟ್ಟಡದಿಂದ ಸುದ್ದಿಯಾಗಿದೆ.

ಶಾಲೆಯ ಗೋಡೆಗಳು ಬಿರುಕು ಬಿಟ್ಟು ಬಾಯಿ ತೆರೆದಂತೆ ಕಾಣುತ್ತಿವೆ. ಮೇಲ್ಚಾವಣಿ ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿಯಲ್ಲಿದೆ. ಕಿಟಕಿಗಳು ಹಾಗೂ ಮರದ ಹೊದಿಕೆಗಳು ಸಂಪೂರ್ಣ ಹಾಳಾಗಿದ್ದು, ಕಟ್ಟಡದ ಸ್ಥಿತಿ ಈಗಲೋ ಆಗಲೋ ಬೀಳುವಂತಾಗಿದೆ.

Shivamogga News ಸುಮಾರು 59 ವರ್ಷಗಳ ಹಳೆಯ ಈ ಶಾಲೆಯಲ್ಲಿ ಇನ್ನೂ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಕಟ್ಟಡದ ದುಸ್ಥಿತಿ ಕಂಡು ಪೋಷಕರು ಆತಂಕಕ್ಕೀಡಾಗಿದ್ದಾರೆ. ಈ ಬಾರಿಯ ಮಳೆಯ ಸಮಯದಲ್ಲಿ ಶಾಲೆ ಕುಸಿದುಬಿಡಬಹುದೆಂಬ ಭಯ ಗ್ರಾಮಸ್ಥರನ್ನು ಕಾಡುತ್ತಿದೆ.

ಶಾಲಾ ಕಟ್ಟಡ ಅಪಾಯಕಾರಿಯಾಗಿರುವ ಹಿನ್ನೆಲೆ ಅನೇಕ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಒಮ್ಮೆ 300 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 60 ರಿಂದ 70 ಮಕ್ಕಳು ಮಾತ್ರ ಉಳಿದಿದ್ದಾರೆ.

ಇಷ್ಟಾದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...