Tuesday, June 16, 2026
Tuesday, June 16, 2026

Karnataka State Road Transport Corporation ವಿದ್ಯಾರ್ಥಿಗಳಿಗೆ ಸಿಹಿಸುದ್ದಿ!. ಉಚಿತ/ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ

Date:

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12 ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.
ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ವಿದ್ಯಾರ್ಥಿ ಬಸ್‌ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು ಮುಂದುವರೆಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್‌ಪಾಸ್‌ಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯು ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು. Karnataka State Road Transport Corporation ರಾಜ್ಯ ವಾಸವಿದ್ದು, ನೆರೆ ರಾಜ್ಯಗಳಲ್ಲಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆ ರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ಪಡೆಯಬಹುದಾಗಿದೆ. ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್‌ಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student passನಲ್ಲಿ ಒದಗಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus...

Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ

Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ...