Tuesday, June 16, 2026
Tuesday, June 16, 2026

Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ

Date:

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus on News” ಎಂಬ ರಾಷ್ಟ್ರಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ. 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು.

ಆಯ್ದ 50 ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು.
ಸ್ಪರ್ಧೆಯ ಷರತ್ತುಗಳು
ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.2025 ರಿಂದ 31-5-2026 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು.
ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಹಾಗೂ ಪ್ರಕಟವಾಗಿರುವ ಯಾವುದಾದರೂಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
ಈ ಸ್ಪರ್ಧೆಯನ್ನು ಸುದ್ಧಿ ಛಾಯಾಗ್ರಾಹಕರಿಗಾಗಿ ಮಾತ್ರ ಆಯೋಜಿಸಲಾಗಿದೆ. ಪ್ರತಿಯೊಬ್ಬ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಆಯಾ ರಾಜ್ಯ ಸರ್ಕಾರಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಪಿಐಬಿಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.
ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿ ಮಾತ್ರ ಸಲ್ಲಿಸಬೇಕು.

ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.

ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು.

Karnataka Media Academy ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
AI ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.
ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ಸೈಟಿನಲ್ಲಿಇರುವ ನಿಗದಿತ ಅರ್ಜಿಯನ್ನು Download ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‌ಗಳನ್ನು focusonnewskma@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 30-06-2026 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.

ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ. 35,000/ ದ್ವಿತೀಯ ಬಹುಮಾನ: ರೂ. 25,000/-, ಹಾಗೂ ತೃತೀಯ ಬಹುಮಾನ: ರೂ. 15,000/- ಗಳನ್ನುನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9845351766 ಹಾಗೂ 9449245980 ನ್ನು ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್‌ ಮೂಲಕ ಸಂಪರ್ಕಿಸ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ

Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ...