Sunday, August 2, 2026
Sunday, August 2, 2026

Government Women’s Residential Polytechnic Shimoga Institute ಲ್ಯಾಟರಲ್ ಎಂಟ್ರಿ ಮೂಲಕ ಶಿವಮೊಗ್ಗ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ 2ನೇವರ್ಷ/ 3 ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆ ಮಾಹಿತಿ

Date:

Government Women’s Residential Polytechnic Shimoga Institute ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆಯು ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ವಿತರಣೆ ದಿ: 17/06/2026, ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಪ್ರಕಟಿಸುವ ದಿನಾಂಕ: 18/06/2026, ಆಪ್‌ಲೈನ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಿ, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಮತ್ತು ಪ್ರವೇಶ ಶುಲ್ಕದೊಂದಿಗೆ ಪ್ರವೇಶಾತಿ ಪಡೆಯಲು ಅಂತಿಮ ದಿನಾಂಕ: 19/06/2026 ಆಗಿರುತ್ತದೆ.
ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್), ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಭಾವಚಿತ್ರ 06 ನ್ನು ಹಾಗೂ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
Government Women’s Residential Polytechnic Shimoga Institute ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ, ಪ್ರಾಂಶುಪಾಲರು, ಮೊ.ಸಂ: 9886610245 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...