Thursday, August 6, 2026
Thursday, August 6, 2026

Chamber Of Commerce Shivamogga ಮಹಿಳಾ ಉದ್ಯಮಿಗಳಿಗೆ ಮಾದರಿ ಸಾಹಸಿ ಡಾ.ಬಿ.ವಿ.ಲಕ್ಷ್ಮೀದೇವಿ : ಬಿ.ಗೋಪಿನಾಥ್

Date:

Chamber Of Commerce Shivamogga ಆಹಾರ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುತ್ತಿರುವ ಡಾ. ಲಕ್ಷ್ಮೀದೇವಿ ಗೋಪಿನಾಥ್ ಅವರು ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಅವರಿಗೆ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು.

ಆಹಾರ ತಯಾರಿಕೆ ವಲಯ ಮತ್ತು ಸ್ಪೂರ್ತಿಯುತ ಮಹಿಳಾ ವಾಣಿಜ್ಯೋದ್ಯಮಿಯಾಗಿ, ಶಿಕ್ಷಣ ತಜ್ಞೆ ಆಗಿ ಸಾಧನೆ ಮಾಡಿರುವುದಕ್ಕೆ ಲಕ್ಷ್ಮೀದೇವಿ ಅವರಿಗೆ ಅಮೆರಿಕ ಸಂಯುಕ್ತ ಸಂಸ್ಥಾನದ ಗ್ಲೋಬಲ್ ರಿಸರ್ಚ್ ಅಂಡ್ ಫೌಂಡೇಶನ್ ‘ಸರ್ಟಿಫಿಕೇಟ್ ಫಾರ್ ಇಂಟರ್ನ್ಯಾಷನಲ್ ಎಕ್ಸೆಲೆನ್ಸ್’ ಪ್ರಶಸ್ತಿ ನೀಡಿದೆ ಎಂದು ತಿಳಿಸಿದರು.

ಲಕ್ಷ್ಮೀದೇವಿ ಗೋಪಿನಾಥ್ ಅವರಿಗೆ ಹಿಂದೆಯು ಸಹ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ಅನೇಕ ಮಹಿಳಾ ಉದ್ಯಮಿ ಪ್ರಶಸ್ತಿ ಸಹ ದೊರಕಿದೆ. ಹೋಟೆಲ್ ಉದ್ಯಮದಲ್ಲಿ ಸಾಕಷ್ಟು ಹೆಸರು ಮಾಡಿದ್ದು, ಅವರ ಸಾಧನೆ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆ ಯಾಗಲಿ ಎಂದು ಆಶಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರದ ವತಿಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಈ ದಿಸೆಯಲ್ಲಿ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕೆ ಸಂಘವು ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದರು.

Chamber Of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್, ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಎಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ , ಜಿ.ವಿ.ಕಿರಣ್ ಕುಮಾರ್ , ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್ , ಸಿ.ಎ.ಶರತ್ , ಎಸ್.ಎಸ್.ಉದಯ್ ಕುಮಾರ್ , ವಿನೋದ್ ಕುಮಾರ್, ಸಹನಾ ಸುಭಾಸ್, ಎಸ್.ಪಿ.ಶಂಕರ್, ಮಂಜೇಗೌಡ, ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಅಶ್ವಥ್ ನಾರಾಯಣ್ ಶೆಟ್ಟಿ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....