Sunday, September 27, 2026
Sunday, September 27, 2026

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

Date:

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳಾದ ಶ್ರೀ ಬಿ.ಕೆ. ಹರಿಪ್ರಸಾದ್, ಶ್ರೀ ಮಳವಳ್ಳಿ ಶಿವಣ್ಣ, ಶ್ರೀ ಪಿ.ವಿ. ಮೋಹನ್, ಶ್ರೀ ವಿನಯ್ ಕಾರ್ತಿಕ್ ಹಾಗೂ ಶ್ರೀ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನಸೌಧದಲ್ಲಿ ಅಭಿನಂದಿಸಿ, ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಇದಾಗಿದೆ.
ನಾವು ಯಾವ ಹೆಜ್ಜೆಯನ್ನಿಟ್ಟು ಮುಂದುವರಿಯುತ್ತಿದ್ದೇವೆಯೋ ಅದಕ್ಕೆ ನಾವೂ ಜೊತೆಗಿದ್ದೇವೆ ಎಂದು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಎಂದು ಪಕ್ಷದ ಗೆಲುವಿನ ಬಗ್ಗೆ ಹೇಳಿದರು.
ನಮ್ಮ ಪಕ್ಷದ ಶಾಸಕರೂ ಒಗ್ಗಟ್ಟಾಗಿ ಬೆಂಬಲಿಸಿದ್ದಾರೆ. ನಮಗೆ ಹೆಚ್ಚಿನ ಮತ ನೀಡಿದ ಬೇರೆ ಬೇರೆ ಪಕ್ಷದ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.‌ ನೀವು ನಮಗೆ ನೀಡಿದ ವಿಶ್ವಾಸ ಜನರಿಗೆ ನೀಡಿದ ಶಕ್ತಿ.

ನಮ್ಮ ಪಕ್ಷದ ಶಾಸಕರ ಒಂದು ಮತವೂ ತಿರಸ್ಕೃತವಾಗಬಾರದು ಎಂದು ತರಬೇತಿ ನೀಡಲಾಗಿತ್ತು.‌ ಇದಕ್ಕೆ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ. ಇದಕ್ಕೆ ದುಡಿದಂತಹ ಪಕ್ಷದ ಎಲ್ಲಾ ಶಾಸಕರು, ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಾಗೂ ಇತರೇ ಕಾರ್ಯದರ್ಶಿಗಳನ್ನು ನಾನು ಅಭಿನಂದಿಸುತ್ತೇನೆ.

D.K. Shivakumar ನಮ್ಮ‌ ಪಕ್ಷದಿಂದ ಐದು ಅಭ್ಯರ್ಥಿಗಳು ನಿಂತಿದ್ದರು. ನಮ್ಮ ಶಾಸಕರ ಸಂಖ್ಯಾಬಲ ಎಷ್ಟಿತ್ತು ಎಂಬುದು ಮಾಧ್ಯಮಗಳಿಗೆ ತಿಳಿದಿತ್ತು. ಐದು ಜನ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿತ್ತು – ಅವರು ಗೆದ್ದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...