Wednesday, August 5, 2026
Wednesday, August 5, 2026

ಶಿವಮೊಗ್ಗ ಕೋಟೆ ಶ್ರೀಆಂಜನೇಯಸ್ವಾಮಿದೇಗುಲದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರಾಗಿ ಎ.ಎಚ್.ಸುನೀಲ್ ಮತ್ತು ರೇಖಾರಂಗನಾಥ್ ನಾಮಕರಣ

Date:

ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರ ನೇಮಕಾತಿ ನಡೆದಿದೆ. ಮಾಜಿ ಪಾಲಿಕೆ ಸದಸ್ಯೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಶ್ರೀಮತಿ ರೇಖಾ ರಂಗನಾಥ್ ಅವರನ್ನು ರಾಜ್ಯ ಸರ್ಕಾರ ಮೂರು ವರ್ಷಗಳ ಅವಧಿಗೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಿದೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ವ್ಯಾಪ್ತಿಯಲ್ಲಿರುವ ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಶ್ರೀಮತಿ ರೇಖಾ ರಂಗನಾಥ್ ಅವರನ್ನು ನೂತನ ಸದಸ್ಯರಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೊಸಮನೆ ಬಡಾವಣೆಯ ಮಾಜಿ ಪಾಲಿಕೆ ಸದಸ್ಯೆಯಾಗಿರುವ ರೇಖಾ ರಂಗನಾಥ್ ಅವರು ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವೆಯನ್ನು ಪರಿಗಣಿಸಿ ಮೂರು ವರ್ಷಗಳ ಅವಧಿಗೆ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಶ್ರೀಮತಿ ರೇಖಾ ರಂಗನಾಥ್ ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮನ್ನು ವ್ಯವಸ್ಥಾಪನ ಸಮಿತಿಗೆ ನೇಮಕಗೊಳಿಸಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು, ರಾಜ್ಯದ ನಾಯಕರು ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ನಿವಾಸಿ ಎ.ಎಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ ಅನ್ವಯ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಒಟ್ಟು 9 ಸದಸ್ಯರನ್ನು ಸಮಿತಿಗೆ ನೇಮಿಸಲಾಗಿದೆ. ಮೂರು ವರ್ಷದ ಅವಧಿಗೆ ಎ.ಎಚ್.ಸುನಿಲ್ ಅವರು ಸಮಿತಿ ಸದಸ್ಯರಾಗಿರುತ್ತಾರೆ.
ಎ.ಎಚ್.ಸುನಿಲ್ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಕಾರ್ಯದರ್ಶಿ ಹಾಗೂ ರಾಮಣ್ಣ ಶ್ರೇಷ್ಠಿ ಪಾರ್ಕ್ನ ಶ್ರೀ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...