Saturday, June 20, 2026
Saturday, June 20, 2026

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್‌ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2 ಆಸನ ಸಾಮರ್ಥ್ಯವುಳ್ಳ ಹಾಗೂ ವಾಹನದ ಒಟ್ಟು ತೂಕ 9000 ಕೆ.ಜಿ. ಮೀರದ ಮಜಲು ಬಸ್ಸು ವಾಹನಗಳ ಏಕ ಮುಖ ಸಂಚಾರ ವ್ಯವಸ್ಥೆಯನ್ನು ಖಚಿತಪಡಿಸಿಕೊಂಡು ಸೂಚಿತ ಸಾಮರ್ಥ್ಯದ ಮಜಲು ಬಸ್ಸು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ:
DC Shivamogga ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.
ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.
ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್ ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. “ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ಜೂ. 12, 2026 ರ ಅಧಿಸೂಚನೆಯೊಂದಿಗೆ ಜೂ.18 ರಿಂದ ಹೊಸದಾಗಿ ಸೇರ್ಪಡೆಗೊಳಿಸಿ ಜಾರಿಗೆ ಬರುವಂತೆ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2 ಆಸನ ಸಾಮರ್ಥ್ಯವುಳ್ಳ ಹಾಗೂ ವಾಹನದ ಒಟ್ಟು ತೂಕ 9000 ಕೆ.ಜಿ. ಮೀರದ ಮಜಲು ಬಸ್ಸು ವಾಹನಗಳ ಏಕ ಮುಖ ಸಂಚಾರ ವ್ಯವಸ್ಥೆಯನ್ನು ಖಚಿತಪಡಿಸಿಕೊಂಡು ಮಜಲು ಬಸ್ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

International Yoga Day ಯಶಸ್ವಿಯಾಗಿ ನಡೆದ ಯೋಗ ದಿನಾಚರಣೆಯ ಜಾಗೃತಿ ಜಾಥಾ

International Yoga Day 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ,...