Sunday, September 27, 2026
Sunday, September 27, 2026

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Date:

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ತಜ್ಞ ವೈದ್ಯರ (Anaesthetist) ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಹ್ವಾನಿಸಲಾಗಿದೆ.
ಒಂದು ವರ್ಷ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ, ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ತಜ್ಞರಿಗೆ ಸಂಭಾವನೆಯನ್ನು
ಎನ್‌ಹೆಚ್‌ಎಂ ಮಾರ್ಗಸೂಚಿಗಳನ್ವಯ ನೀಡಲಾಗುವುದು.
Sri Jayachamarajendra Government ಜೂನ್ 24 ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ‌ ನೇರ ಸಂದರ್ಶನ ನಡೆಯಲಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ.ನಟರಾಜ್ ಕೆ ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...