Sunday, September 27, 2026
Sunday, September 27, 2026

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

Date:

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರೈತರು ತೋಟಗಳಲ್ಲಿ ಬೆಳೆದ ಅಡಿಕೆ ಮರಗಳು ಪ್ರಕೃತಿ ವಿಕೋಪದಿಂದಾಗಿ ಅವಸಾನಗೊಂಡಿದ್ದು, ಈ ಸಂಬಂಧ ಬಾಧಿತ ರೈತರಿಗೆ ಪರಿಹಾರ ಕ್ರಮವಾಗಿ ಸರ್ಕಾರಕ್ಕೆ ವಿಶೇಷ ಪ್ಯಾಕೇಜ್ನೀಡುವಂತೆ ಸಲ್ಲಿಸಲಾಗಿದ್ದ ಪ್ರಸ್ತಾವನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿ, ಸಂತ್ರಸ್ಥ ರೈತರಿಗೆ ಪರಿಹಾರದ ಮೊತ್ತ ದೊರಕಿಸಿಕೊಡಲು ಜಿಲ್ಲಾಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸಾಂಸದ ಬಿ.ವೈ.ರಾಘವೇಂದ್ರ ಅವರು ಸೂಚಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ನಜೀರ್ಸಾಭ್ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೆಳೆಹಾನಿ ಕುರಿತು ಜಿಲ್ಲಾಡಳಿತ ಈಗಾಗಲೇ ಬಾಧಿತ ರೈತರಿಂದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ನಿಯಮನಾನುಸಾರ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಶೇ33ಕ್ಕಿಂತ ಮೇಲ್ಪಟ್ಟು ಹಾನಿಗೊಳಗಾದ ತೋಟಗಾರಿಕೆ ಬೆಳೆಗೆ ಪ್ರತಿ ಹೆಕ್ಟೇರ್ಬೆಳೆಗೆ 22,000/-ಗಳನ್ನು ಬಿಡುಗಡೆಗೊಳಿಸುವಂತೆಯೂ ಕೋರಿಕೆ ಸಲ್ಲಿಸಲಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದ ಎಂದರು.
ಕಳೆದ ಏಪ್ರಿಲ್ಮಾಹೆಯಲ್ಲಿ ಬಿದ್ದ ಮಳೆಯಿಂದಾಗಿ ಹಾನಿಗೊಳಗಾದ ಒಟ್ಟು 592ಮನೆಗಳ ಪೈಕಿ 66ಮನೆಗಳು ಸಂಪೂರ್ಣ ನಾಶಗೊಂಡಿವೆ. 526ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮೇ ಮಾಹೆಯಲ್ಲಿ 220ಮನೆಗಳು ಹಾನಿಗೊಳಗಾಗಿದ್ದು, 1ಮನೆ ಪೂರ್ಣಪ್ರಮಾಣದಲ್ಲಿ ಹಾಗೂ 219ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಏಪ್ರಿಲ್ಮಾಹೆಯಲ್ಲಿ 514ಹೆ. ಮತ್ತು ಮೇ ಮಾಹೆಯಲ್ಲಿ 460ಹೆಕ್ಟೇರ್ಬೆಳೆನಾಶವಾಗಿದ್ದು, ಈ ಸಂಬಂಧ ಸಂತ್ರಸ್ಥ ಕುಟುಂಬಗಳಿಂದ ಮಾಹಿತಿ ಪಡೆದು, ಪರಿಹಾರ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇದ್ದಾಗ್ಯೂ ಸಂತ್ರಸ್ಥರಿಗೆ ಪರಿಹಾರ ಧನ ದೊರಕಿಸಿಕೊಡದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮಳೆಯಿಂದ ಹಾನಿಗೊಳಗಾಗಿರುವ ಅಧಿಕೃತ ಮನೆಗಳಿಗೆ ಪರಿಹಾರ ದೊರೆಯಲಿದೆ. ಅನಧಿಕೃತ ಮನೆಗಳಿಗೆ ಪರಿಹಾರಧನ ನೀಡಲು ಅವಕಾಶ ಇಲ್ಲವಾಗಿದ್ದು, ಸಂಬಂಧಿತ ಇಲಾಖಾ ಸಚಿವರ ಗಮನಸೆಳೆದು, ಸಂತ್ರಸ್ಥ ಕುಟುಂಬದವರೆಲ್ಲರಿಗೂ ಪರಿಹಾರ ಧನ ದೊರಕಿಸಿಕೊಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
B.Y. Raghavendra ಕಳೆದ ಸಾಲಿನಲ್ಲಿ 17446 ಹೆಕ್ಟೇರ್ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಗೆ ಜಿಲ್ಲೆಯ ರೈತರು ಬೆಳೆವಿಮೆಗಾಗಿ ಒಟ್ಟು 3.08ಕೋಟಿ ಮೊತ್ತವನ್ನು ಪಾವತಿಸಿದ್ದರು. ಆದರೆ, ಸರಿಯಾದ ಕ್ರಮದಲ್ಲಿ ಬೆಳೆಕಟಾವು ಮಾನದಂಡಗಳನ್ನು ಅನುಸರಿಸದಿರುವುದರಿಂದ ಸರಿಯಾಗಿ ಮೌಲ್ಯಮಾಪನ ನಡೆಯದೇ ಬಾದಿತ ರೈತರಿಗೆ ಸರಿಯಾದ ಮೊತ್ತ ಪಾವತಿಯಾಗಿರುವುದಿಲ್ಲ. ಅಂತಹ ಸಂತ್ರಸ್ಥ ರೈತರಿಗೆ ಸರಿಯಾದ ವಿಮಾ ಪರಿಹಾರ ಮೊತ್ತವನ್ನು ದೊರಕಿಸಿಕೊಡಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಪಂಚಾಯಿತಿಗೆ 4ಕಡೆ ಬೆಳೆಕಟಾವು ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ಸರಿಯಲ್ಲ. ಕನಿಷ್ಟ 10ಕಡೆಗಳಲ್ಲಾದರೂ ಬೆಳೆ ಕಟಾವು ಪ್ರಯೋಗಗಳು ನಡೆಯುವಂತಾಗಬೇಕು. ಅದಕ್ಕಾಗಿ ಸಂಬಂಧಿತ ಇಲಾಖಾ ಅಧಿಕಾರಿಗಳು ಮಾರ್ಪಡಿಸಿದ ಸೂಚನೆಗಳೊಂದಿಗೆ ಬೆಳೆಕಟಾವು ಪ್ರಯೋಗಗಳು ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡುವಂತೆ ಅವರು ಸೂಚಿಸಿದ ಅವರು, ಈ ವಿಷಯದಲ್ಲಿ ಕೃಷಿ ತಜ್ಞರ ಸಲಹೆ ಪಡೆದು ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು.
ಬೆಳೆ ವಿಮಾ ಮೊತ್ತ ಪಾವತಿಸಲು ಮೆಕ್ಕೆಜೋಳ ಬೆಳೆಗಾರರಿಗೆ ಜುಲೈ 31 ಹಾಗೂ ಭತ್ತ ಮತ್ತು ರಾಗಿ ಬೆಳೆಗಾರರಿಗೆ ಆಗಸ್ಟ್14ಕೊನೆಯ ದಿನವಾಗಿದೆ. ತೀವ್ರ ತರಹದ ಮಳೆಯ ಕೊರತೆಯಿಂದಾಗಿ ಈವರೆಗೆ ನಿರೀಕ್ಷಿತ ಪ್ರಮಾಣದ ಬಿತ್ತನೆ ಕಾರ್ಯ ನಡೆಯದಿರುವುದು, ರೈತರು ಚಿಂತಾಕ್ರಾಂತರಾಗಿರುವುದು ಆತಂಕವನ್ನುಂಟು ಮಾಡಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ರೈತರಿಗೆ ಭರವಸೆ ನೀಡುವ, ಅವರು ಮುಂದಿನ ದಿನಗಳಲ್ಲಿ ಬರಬಹುದಾದ ಮಳೆಯ ಅಂದಾಜಿನಂತೆ ಬಿತ್ತನೆ ಮಾಡುವ ಹಾಗೂ ಮಾಡದಿರುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಹಾಗೂ ಬೆಳೆವಿಮಾ ಮೊತ್ತ ಪಾವತಿಸಲು ಪ್ರೇರೇಪಿಸುವಂತೆ ಅವರು ಸಲಹೆ ನೀಡಿದರು.
ಕಳೆದ ವರ್ಷದ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಶೇ.60ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಬಿತ್ತನೆ ಕಾರ್ಯ ಆರಂಭವಾಗದಿರುವುದು ಆತಂಕಕಾರಿ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಮಳೆಮಾಪನ ಕೇಂದ್ರಗಳು ಹಾಗೂ ಕೆಲವು ಕಡೆಗಳಲ್ಲಿ ಕೇಂದ್ರಗಳ ನೆರೆಯ ಮಳೆಮಾಪನ ಕೇಂದ್ರಗಳು ಹಾಳಾಗಿದ್ದು, ಸಂತ್ರಸ್ಥ ರೈತರಿಗೆ ಬೆಳೆವಿಮಾ ಪರಿಹಾರ ಮೊತ್ತ ಕೊಡುವಲ್ಲಿ ತೀವ್ರತರಹದ ಅನ್ಯಾಯವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಂಬಂಧಿಸಿದ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ನಿರ್ವಾಹಕರು ರೈತರಿಗೆ ಪರಿಹಾರಧನ ಕೊಡಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿರುವ 280 ಮಳೆಮಾಪನ ಕೇಂದ್ರಗಳಲ್ಲಿ 72ಕೇಂದ್ರಗಳು ಮಾತ್ರ ಕ್ರಿಯಾಶೀಲವಾಗಿದ್ದು, ಉಳಿದ ಕೇಂದ್ರಗಳು ದುರಸ್ತಿಯಲ್ಲಿರುವುದನ್ನು ಅಧಿಕಾರಿಗಳಿಂದ ತಿಳಿದಿದ್ದು, ಮಳೆ ಮಾಪನ ಕೇಂದ್ರಗಳ ಮೇಲ್ವಿಚಾರಕ್ಕೆ ವಿಚಾರಿಸಲಾಗಿ ಇನ್ನೂ ಒಂದು ವಾರದೊಳಗಾಗಿ ಸುಮಾರು 220ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಹಾಗೂ ದುರಸ್ತಿ ಮಾಡಿದ ಕೇಂದ್ರಗಳಿಗೆ ಸಿಮ್ಅಳವಡಿಸಿ, ಕ್ರಿಯಾಶೀಲವಾಗಿರುವಂತೆ ಗಮನಹರಿಸಲಾಗುವುದು ಎಂದು ತಿಳಿಸಿರುವುದಾಗಿ ಅವರು ಹೇಳಿದರು. ಮಳೆಮಾಪನ ಕೇಂದ್ರಗಳ ಅಸಮರ್ಪಕ ದುರಸ್ತಿಯಿಂದಾಗಿ ದಾಖಲೆಗಳ ಸಮರ್ಪಕ ನಿರ್ವಹಣೆ ಆಗದೆ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ಹಿಂದಿನ ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಬಿದ್ದ ಉತ್ತಮ ಮಳೆಯಿಂದಾಗಿ ಏತ ನೀರಾವರಿ ಸೌಲಭ್ಯವನ್ನು ಬಳಸಿಕೊಂಡಿರಲಿಲ್ಲ. ಆದರೆ, ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಕೆರೆಕಟ್ಟೆ ಕಾಲುವೆಗಳನ್ನು ತುಂಬಿಸಿಕೊಳ್ಳುವುದು, ಏತನೀರಾವರಿ ಸೌಲಭ್ಯ ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅದಕ್ಕಾಗಿ ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸನ್ನದ್ಧವಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಭಾರೀ ನೀರಾವರಿ ಇಲಾಖೆಯ ವ್ಯಾಪ್ತಿಗೊಳಪಡುವ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮೆಸ್ಕಾಂಗೆ ಒಟ್ಟು 32ಕೋಟಿ ರೂ.ಗಳ ವಿದ್ಯುತ್ಶುಲ್ಕ ಪಾವತಿಸುವುದು ಬಾಕಿ ಇದೆ. ಮುಂದಿನ ದಿನಗಳಲ್ಲಿ ಸೋಲಾರ್ನಿಂದ ಏತ ನೀರಾವರಿ ಯೋಜನೆಯನ್ನು ಬಳಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಸರ್ಕಾರಕ್ಕೆ ಸಲಹೆ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಮುಂಗಾರು ಬೆಳೆಗೆ ಅಗತ್ಯವಾಗಿರುವ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ. ವನವಾಸಿಗಳು ಹಾಗೂ ಬಗರ್ಹುಕುಂ ಸಾಗುವಳಿದಾರರಿಗೆ ರಸಗೊಬ್ಬರದ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಪ್ರಸ್ತುತ ಸಂದರ್ಭದಲ್ಲಿ ರೈತರು ಸಂಭವನೀಯ ಸಮಸ್ಯೆಯಿಂದ ಪಾರಾಗಲು ಅಧಿಕಾರಿಗಳು ರೈತರಿಗೆ, ರೈತರ ಸಮಸ್ಯೆಗಳಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ಸೇರಿದಂತೆ ಕೃಷಿ, ತೋಟಗಾರಿಕೆ, ವಿಮೆ, ಕಂದಾಯ, ಪಂಚಾಯತ್ರಾಜ್ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...