Friday, August 14, 2026
Friday, August 14, 2026

ಸಿಇಟಿಯಲ್ಲಿ ಕಡಿಮೆ ಅಂಕ : ನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿಯ ಸಾವು

Date:

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 20 ದಿನಗಳ ಹಿಂದೆ ಕಳೆನಾಶಕ ಕುಡಿದಿದ್ದ ವಿದ್ಯಾರ್ಥಿ ಇದೀಗ ಚಿಕಿತ್ಸೆ ಪಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತ ದುರ್ದೈವಿ, ಈತ ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ ಕಳೆದ ಜೂನ್ 6ರಂದು ಹೊರಬಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶದಲ್ಲಿ ಈತನಗೆ ಕಡಿಮೆ ಮಾರ್ಕ್ ಬಂದಿತ್ತು. ಈ ಕಾರಣಕ್ಕೆ ವಿದ್ಯಾರ್ಥಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದ ಎನ್ನಲಾಗಿದೆ.
ಆನಂತರ ವಿದ್ಯಾರ್ಥಿಯನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಇದ್ದಾಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ಧಾನೆ. ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...