Wednesday, July 1, 2026
Wednesday, July 1, 2026

D.K. Shivakumar ಗಣಿಗಾರಿಕೆ ನಡೆಸಲು ಸರ್ಕಾರಿ ಜಾಗವನ್ನು ಪಡೆದು ಐದು ವರ್ಷವಾದರೂ ಗಣಿ ನಡೆಸದಿದ್ದರೆ ಕ್ರಮಕೈಗೊಳ್ಳಿ : ಸೀಎಂ ಡಿ.ಕೆ.ಶಿವಕುಮಾರ್

Date:

D.K. Shivakumar ರಾಜ್ಯದಲ್ಲಿ ಅರಣ್ಯ ಸಂರಕ್ಷಣೆ, ಅರಣ್ಯ ಅನುಮತಿ ಪ್ರಕ್ರಿಯೆ ಹಾಗೂ ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಮತ್ತಷ್ಟು ಒತ್ತು ನೀಡಿದೆ. ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗಣಿಗಾರಿಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಯಾವುದೇ ಚಟುವಟಿಕೆ ಆರಂಭಿಸದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಕಿ ಉಳಿದಿರುವ ಎಲ್ಲಾ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದ ಅವರು, ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.

ಅರಣ್ಯವಾಸಿಗಳ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನಿಯಮಾನುಸಾರ ಆದ್ಯತೆಯಿಂದ ಒದಗಿಸಬೇಕೆಂದು ಸೂಚಿಸಿದರು.

ಅರಣ್ಯ ಭೂಮಿ ಒತ್ತುವರಿ ತೆರವು, ಮಾನವ–ವನ್ಯಜೀವಿ ಸಂಘರ್ಷ ತಡೆ ಹಾಗೂ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ನಮ್ಮ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಅಮೂಲ್ಯವಾಗಿದ್ದು, ಅದರ ಸಂರಕ್ಷಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.

ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಆಡಳಿತ ವ್ಯವಸ್ಥೆ ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಅಧಿಕಾರಿಗಳು, 2025–26ನೇ ಸಾಲಿನಲ್ಲಿ ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣಹಾನಿ, ಅಂಗವಿಕಲತೆ, ಗಾಯ ಹಾಗೂ ಆಸ್ತಿನಾಶ ಸೇರಿದಂತೆ ವಿವಿಧ ಪ್ರಕರಣಗಳಿಗೆ 63 ಕೋಟಿ 6 ಲಕ್ಷ ರೂಪಾಯಿ ಪರಿಹಾರ ವಿತರಿಸಿರುವುದಾಗಿ ಮಾಹಿತಿ ನೀಡಿದರು.

ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್‌, ಆನೆ ತಡೆ ಕಂದಕ, ಸೌರತಂತಿ ಬೇಲಿ, ಆನೆ ಮತ್ತು ಚಿರತೆ ಕಾರ್ಯಪಡೆಗಳ ಜೊತೆಗೆ ಎಸ್‌ಎಂಎಸ್‌ ಹಾಗೂ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರಾಣಿಗಳು ಹೊಸ ಮಾರ್ಗಗಳನ್ನು ಕಂಡುಕೊಂಡು ಅಡೆತಡೆಗಳನ್ನು ದಾಟುವ ಸಾಮರ್ಥ್ಯ ಹೊಂದಿರುವುದರಿಂದ, ಅಧಿಕಾರಿಗಳೂ ಹೊಸ ತಂತ್ರಜ್ಞಾನ ಮತ್ತು ಹೊಸ ಮಾರ್ಗೋಪಾಯಗಳ ಕುರಿತು ನಿರಂತರ ಅಧ್ಯಯನ ನಡೆಸಬೇಕೆಂದು ಸಲಹೆ ನೀಡಿದರು.

D.K. Shivakumar ಸಭೆಯಲ್ಲಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ, ವನ್ಯಜೀವಿಗಳ ಮೇಲ್ವಿಚಾರಣೆಗೆ ಥರ್ಮಲ್ ಡ್ರೋನ್ ಬಳಕೆ, ಹಾಗೂ ಶರಾವತಿ ಪಂಪ್ ಸ್ಟೋರೇಜ್, ಗೋವಾ ತಮ್ನೇರ್, ಕಳಸಾ–ಬಂಡೂರಿ ಮತ್ತು ಬಿಡಿಎ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗಳಿಗೆ ಸಂಬಂಧಿಸಿದ ಬಾಕಿ ಅರಣ್ಯ ಅನುಮತಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ದೇಶಪ್ರೇಮಿಯಾಗಿ ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ರಾಜ್ಯ ಹಾಗೂ ದೇಶದ ಸಾರ್ವಜನಿಕ ಭದ್ರತೆ ಕಾಪಾಡುವ ನಿಟ್ಟಿನಲ್ಲಿ...