Tuesday, August 25, 2026
Tuesday, August 25, 2026

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು – ಮತ್ತೋರ್ವನಿಗೆ ಗಂಭೀರ ಗಾಯ

Date:

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿಯ ತಾರಿಗ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಚೋರಡಿ ಗ್ರಾಮದ ನಿವಾಸಿ ಸಂತೋಷ್ (26), ತಂದೆ ಬೊಮ್ಮಣ್ಣ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಜೊತೆಯಲ್ಲಿದ್ದ ವೀರಭದ್ರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನು ಹಿಡಿಯಲು ಬಳಸುವ ತೆಪ್ಪವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಚೋರಡಿಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತಾರಿಗ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಸುಮಾರು 50 ಅಡಿ ಎತ್ತರದಲ್ಲಿದ್ದ ಒಣ ಮರದ ರೆಂಬೆ ಏಕಾಏಕಿ ಬೈಕ್ ಮೇಲೆ ಬಿದ್ದಿದೆ.

ರೆಂಬೆ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳು ವೀರಭದ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಸಂತೋಷ್ ಅವರ ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...