Wednesday, July 8, 2026
Wednesday, July 8, 2026

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾಗಲೇ ಅಸುನೀಗಿದ ಶಿಕ್ಷಕಿ ಮನೆಗೆ ಡೀಸಿ ಅವರ ಭೇಟಿ

Date:

ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಮಹಿಳಾ ಅಧಿಕಾರಿ, ಶಿಕ್ಷಕಿ ಮಂಜುಳಾ(50) ಇವರು ಸೋಮವಾರ ಮೃತಪಟ್ಟಿದ್ದು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಭದ್ರಾವತಿ ತಾಲ್ಲೂಕಿನ ಕಲ್ಲಾಪುರ ಬಳಿ ಕೋಡಿ ಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾಗ ಇದ್ದಕ್ಕಿದ್ದಂತೆ ಅವರು ಕುಸಿದು ಬಿದ್ದು ಮೃತಪಟ್ಟಿರುತ್ತಾರೆ. ಮೃತರ ಪಾರ್ಥಿವ ಶರೀರದ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.
ಕರ್ತವ್ಯದಲ್ಲಿದ್ದಾಗಲೇ ಮರಣ ಹೊಂದಿದ ಬಿಎಲ್‌ಓ ಅವರ ಕುಟುಂಬಕ್ಕೆ ಸರ್ಕಾರದ ನಿಯಮಾವಳಿಗಳನ್ವಯ ಸಿಗಬೇಕಾದ ಸೌಲಭ್ಯ ಹಾಗೂ ಪರಿಹಾರದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ, ತಹಶೀಲ್ದಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...