Thursday, July 9, 2026
Thursday, July 9, 2026

ರೈತರ ಏಳಿಗೆಗಾಗಿ 23 ನೂತನ ತಳಿಗಳ ಅಭಿವೃದ್ಧಿ- ಡಾ.ಆರ್.ಸಿ.ಜಗದೀಶ್

Date:

ಸಂಶೋಧನೆಯಲ್ಲಿ ನಾವೀನ್ಯತೆಯನ್ನು ತರಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು, ಅತ್ಯಾಧುನಿಕ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ಪುಷ್ಠಿ ನೀಡುವ ಕಾರ್ಯವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ. ಇದರ ಫಲವಾಗಿ ಕಳೆದ ವರ್ಷ ರೈತರ ಏಳಿಗೆಗಾಗಿ ವಿವಿಧ ಬೆಳೆಗಳ ನೂತನ 23 ತಳಿಗಳು, 58 ತಂತ್ರಜ್ಞಾನಗಳು ಹಾಗೂ 3 ಪೇಟೆಂಟ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ ಅವರು ತಿಳಿಸಿದರು.
ಇರುವಕ್ಕಿಯ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 10ನೇ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ನೂತನ ವಿಶ್ವವಿದ್ಯಾಲಯವಾಗಿದ್ದರೂ, ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಹಾಗೂ ಪಿಹೆಚ್‌ಡಿ ಪದವಿಗಳನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ಸುದೀರ್ಘ ಇತಿಹಾಸ ಹೊಂದಿರುವ ಇತರೆ ಕೃಷಿ ವಿಶ್ವವಿದ್ಯಾಲಯಗಳ ಮಟ್ಟಕ್ಕೆ ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಅಭಿವೃದ್ಧಿ ಸಾಧಿಸಿದೆ. ಇಲ್ಲಿನ ವಿದ್ಯಾರ್ಥಿಗಳು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಹಾಗೂ ವಿದೇಶಗಳಲ್ಲಿ ಅಧ್ಯಯನ ಕೈಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ನಡೆಸುವ ಅತ್ಯಾಧುನಿಕ ಸಂಶೋಧನೆಗಳು ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವ ನವೀನ ತಂತ್ರಜ್ಞಾನಗಳ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಕುಲಪತಿಗಳು ಆಶಾವಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಿಕ್ಷಣ ನಿರ್ದೇಶಕರಾದ ಡಾ. ಬಿ. ಹೇಮ್ಲಾ ನಾಯ್ಕ ಅವರು ಮಾತನಾಡಿ, “ಕೃಷಿ ಕ್ಷೇತ್ರದ ಸಂಶೋಧನೆ ಎಂಬುದು ನಿರಂತರ ಪ್ರಕ್ರಿಯೆ. ರೈತರು ಅನುಭವಿಸುವ ಸಂಕಷ್ಟಗಳಿಗೆ ವಿವಿಧ ತಂತ್ರಜ್ಞಾನಗಳ ಮೂಲಕ ಸರಿಯಾದ ಸಮಯಕ್ಕೆ ಸೂಕ್ತ ಪರಿಹಾರ ನೀಡುವಲ್ಲಿ ಯುವ ವಿಜ್ಞಾನಿಗಳ ಪಾತ್ರ ಮಹತ್ತರವಾಗಿದೆ. ಬಹುಶಿಸ್ತೀಯ ವಿಜ್ಞಾನಿಗಳ ಪರಿಶ್ರಮ ಮತ್ತು ವಿದ್ಯಾರ್ಥಿಗಳ ಸಂಶೋಧನೆಯ ಫಲವಾಗಿ ಹೊರಹೊಮ್ಮುವ ನವೀನ ತಂತ್ರಜ್ಞಾನಗಳು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೆರವಾಗಲಿವೆ” ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದ ಡೀನ್ (ಸ್ನಾತಕೋತ್ತರ) ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಡಾ. ಟಿ. ಕೆ. ನಾಗರತ್ನ ಅವರು, “ಈ ಸಂಶೋಧನಾ ಸಮ್ಮೇಳನದಲ್ಲಿ 104 ಸ್ನಾತಕೋತ್ತರ ವಿದ್ಯಾರ್ಥಿಗಳು ಪೋಸ್ಟರ್ ಪ್ರಸ್ತುತಿ ಮೂಲಕ ಹಾಗೂ 11 ಡಾಕ್ಟರಲ್ (ಪಿಹೆಚ್‌ಡಿ) ವಿದ್ಯಾರ್ಥಿಗಳು ಮೌಖಿಕ ಪ್ರಸ್ತುತಿ ಮೂಲಕ ತಮ್ಮ ಸಂಶೋಧನಾ ಫಲಿತಾಂಶಗಳನ್ನು ಮಂಡಿಸಲಿದ್ದಾರೆ. ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ ನುರಿತ ತಜ್ಞರ ತಂಡವು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನು ನೀಡಲಿದೆ” ಎಂದು ಮಾಹಿತಿ ನೀಡಿದರು.
ಸಮ್ಮೇಳನದಲ್ಲಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಎಸ್. ಶ್ರೀಧರ, ವಿಸ್ತರಣಾ ನಿರ್ದೇಶಕರಾದ ಡಾ. ರಾಘವೇಂದ್ರ ಮೇಸ್ತ, ವಿದ್ಯಾರ್ಥಿ ಕಲ್ಯಾಣ ಡೀನ್ ಡಾ. ನಾರಾಯಣ ಮಾವರಕರ ಹಾಗೂ ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ. ಹೆಚ್.ಕೆ. ವೀರಣ್ಣ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....