Saturday, September 12, 2026
Saturday, September 12, 2026

ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಿ. ಶಾಸಕ ಚೆನ್ನಿ ಆದೇಶ

Date:

ಶಿವಮೊಗ್ಗ ನಗರದ ಕೆಲವು ವಾರ್ಡ್‌ಗಳಲ್ಲಿ ಕಳೆದ ಕೆಲ ದಿನಗಳಿಂದ ತಾಂತ್ರಿಕ ಕಾರಣಗಳಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕರಾದ ಎಸ್.ಎನ್. ಚೆನ್ನಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಗರದ ನ್ಯೂ ಮಂಡ್ಲಿ ವಾಟರ್ ಪಂಪ್ ಹೌಸ್ ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿದ್ದ ಜಲಮಂಡಳಿಯ ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಪ್ರಸ್ತುತ ನಡೆಯುತ್ತಿರುವ ದುರಸ್ತಿ ಕಾರ್ಯದ ಪ್ರಗತಿಯ ಮಾಹಿತಿಯನ್ನು ಪಡೆದುಕೊಂಡ ಶಾಸಕರು, ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಲು ಆದೇಶಿಸಿದರು. ತಾಂತ್ರಿಕ ಅಡಚಣೆಯನ್ನು ಸಂಪೂರ್ಣವಾಗಿ ನಿವಾರಿಸಿ, ಎಂದಿನಂತೆ ವ್ಯವಸ್ಥಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಗರದ ಜನತೆಗೆ ಕುಡಿಯುವ ನೀರಿನ ಕೊರತೆಯಾಗದಂತೆ ಪರ್ಯಾಯ ಕರಡು ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಉಂಟಾಗಿರುವ ಈ ತಾತ್ಕಾಲಿಕ ತೊಂದರೆಯನ್ನು ಜಲಮಂಡಳಿಯು ಶೀಘ್ರದಲ್ಲೇ ಬಗೆಹರಿಸಲಿದ್ದು, ನಾಗರಿಕರು ಸಹಕರಿಸಬೇಕಾಗಿ ಕೋರಿದ್ದಾರೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಾಗೂ ಜಲ ಮಂಡಳಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...