Saturday, September 12, 2026
Saturday, September 12, 2026

ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ವಿವಿಧ ಬೆಳೆಗಳಿಗೆ ಲಭ್ಯವಿರುವ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ

Date:

ಶಿವಮೊಗ್ಗ ಜಿಲ್ಲೆಯ ರೈತ ಬಾಂಧವರಿಗಾಗಿ 2026-27ನೇ ಸಾಲಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ’ಯನ್ನು ಜಾರಿಗೊಳಿಸಲಾಗಿದ್ದು, ಸರ್ಕಾರದಿಂದ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ಈ ಕೆಳಗಿನ ಬೆಳೆಗಳಿಗೆ ವಿಮೆ ಸೌಲಭ್ಯ ದೊರೆಯಲಿದೆ:
ಹೋಬಳಿ ಮಟ್ಟಕ್ಕೆ: ರಾಗಿ (ಮಳೆ ಆಶ್ರಿತ).
ಗ್ರಾಮ ಪಂಚಾಯತಿ ಮಟ್ಟಕ್ಕೆ: ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ).
ಬೆಳೆ ಸಾಲ ಪಡೆದ ಹಾಗೂ ಪಡೆಯದ ಉಭಯ ರೈತರೂ ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಬಹುದಾಗಿದೆ.
ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಜುಲೈ 31,ಭತ್ತ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಆಗಸ್ಟ್ 14 ನೋಂದಾಯಿಸಿಕೊಳ್ಳಲು ಅಂತಿಮ ದಿನವಾಗಿರುತ್ತದೆ.
ಬೆಳೆ ಸಾಲ ಪಡೆದ ರೈತರಿಗೆ: ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಇಲ್ಲದಿದ್ದರೆ, ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು.
ಬೆಳೆ ಸಾಲ ಪಡೆಯದ ರೈತರಿಗೆ: ಇಂತಹ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ ಸರ್ಕಾರದ ಅಧಿಕೃತ ವೆಬ್‌ಸೈಟ್ samrkshane.karnataka.gov.in ಮೂಲಕವೂ ಮಾಹಿತಿ ಪಡೆಯಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...