Saturday, September 12, 2026
Saturday, September 12, 2026

ಜಿಲ್ಲಾ ವಲಯ ಮೀನುಗಾರಿಕೆ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿಗಳ ಆಹ್ವಾನ

Date:

2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿಯ ವಿವಿಧ ಮೀನುಗಾರಿಕೆ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಶಿವಮೊಗ್ಗ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಮೀನುಗಾರಿಕೆ ಸಲಕರಣೆ ಕಿಟ್/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆಯಡಿ ರೂ. 10,000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ನೆರವು ನೀಡಲಾಗುವುದು. ಕಳೆದ 3 ವರ್ಷಗಳಲ್ಲಿ ಈ ಕಿಟ್ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು.‌
ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಯೋಜನೆಯಡಿ ಮೀನು ಮಾರಾಟ ಮತ್ತು ಸಾಗಣೆಗೆ ನೆರವಾಗುವಂತೆ ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಸಲು ಸಹಾಯಧನ ನೀಡಲಾಗುವುದು. ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದವರು ಅರ್ಹರಾಗಿರುವುದಿಲ್ಲ.
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪಂಚಾಯತ್ ಯೋಜನೆಗಳ ಅಧಿಕೃತ ಪೋರ್ಟಲ್ https://shimoga.nic.in ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 16-07-2026,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2026 ಆಗಿರುತ್ಅಥವಾ

ಹೆಚ್ಚಿನ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...