Friday, July 17, 2026
Friday, July 17, 2026

ಮತದಾನ ಪ್ರಜಾಪ್ರಭುತ್ವದ ಪ್ರಮುಖ ಅಸ್ತ್ರ. ಅದರ ಮಹತ್ವವನ್ನ ನಾವು ಅರಿಯಬೇಕು- ಎನ್.ಹೇಮಂತ್

Date:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ ಎನ್ ಜುಲೈ 14ರಂದು ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ವಿವಿಧ ಪ್ರಗತಿ ಪರಿಶೀಲನೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್ ಐ ಆರ್ ಪ್ರಗತಿ ಪರಿಶೀಲನೆ‌ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಸಿಇಒ ಅವರು, ನಂತರ ಬಿ.ಎಲ್.ಒ ಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಮತದಾರರನ್ನು ಭೇಟಿಯಾಗಿ, ಅವರಿಗೆ ಎಸ್ ಐ ಆರ್ ಹಾಗೂ ಮತದಾನದ ಪ್ರಕ್ರಿಯೆಗಳ ಕುರಿತು ಸವಿಸ್ತಾರವಾದ ಮಾಹಿತಿ ಮತ್ತು ಜಾಗೃತಿ ಮೂಡಿಸಿದರು.
ಹಸಿರುಮಕ್ಕಿ ಲಾಂಚ್‌ನಲ್ಲಿ ‘ಸ್ವೀಪ್’ ಸಂಭ್ರಮ
ಇದಾದ ಬಳಿಕ, ತಾಲ್ಲೂಕಿನ ಪ್ರಸಿದ್ಧ ಹಸಿರುಮಕ್ಕಿ ಲಾಂಚ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವೀಪ್ (SVEEP – ಮತದಾರರ ಶಿಕ್ಷಣ ಮತ್ತು ಚುನಾವಣಾ ಸಹಭಾಗಿತ್ವ) ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿ, ಮತದಾನದ ಮಹತ್ವದ ಕುರಿತು ನೆರೆದಿದ್ದ ಸಾರ್ವಜನಿಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಪಂಚಾಯತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು , ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್ ಮತ್ತು ಗ್ರಾಮೀಣ ಉದ್ಯೋಗ), ಕೋಳೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Aerticle ಚಿನ್ನಕ್ಕಿಂತಲೂ ಚೆನ್ನ, ಚನ್ನಪ್ಪಯ್ಯ ಅವಧೂತರು ...

Klive Special Aerticle ದಾವಣಗೆರೆಯ ಸಮೀಪದ ಆನಗೋಡಿನಿಂದ ಸುಮಾರು 3 ಕಿ.ಮೀ...

ವಾಡಿಕೆಗಿಂತ ಕಡಿಮೆ ಮಳೆ ರೈತರು ಕೃಷಿ ಇಲಾಖೆ ಸೂಚಿಸಿದ ವ್ಯವಸಾಯ ಪದ್ಧತಿ ಅನುಸರಿಸಿ : ಗಿರಿಜಾ ಪಟ್ಟಣಶೆಟ್ಟಿ

ಶಿವಮೊಗ್ಗ ತಾಲ್ಲೂಕಿನಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂದ ಕಡಿಮೆ ಮಳೆಯಾಗಿರುವುದಲ್ಲದೇ,...