Friday, July 17, 2026
Friday, July 17, 2026

ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 18 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆ ಪಡೆದಿರಬೇಕು.

ಫಾರ್ಮಸಿ ಅಧಿಕಾರಿಗಳು : ಒಟ್ಟು 24 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ನೋಂದಣಿಯಾಗಿರಬೇಕು.

ಅರ್ಹ ಅಭ್ಯರ್ಥಿಗಳು ದಿನಾಂಕ 16-07-2026 ರ ಬೆಳಿಗ್ಗೆ 10:30 ರಿಂದ ದಿನಾಂಕ 25-07-2026 ರ ಸಂಜೆ 5:30 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಈ ಎರಡು ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕಚೇರಿ ಅವಧಿಯಲ್ಲಿ ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ’ ಇಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-222382 ಅಥವಾ ಇಮೇಲ್ ಐಡಿ: dhoshimoga@gmail.com ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Aerticle ಚಿನ್ನಕ್ಕಿಂತಲೂ ಚೆನ್ನ, ಚನ್ನಪ್ಪಯ್ಯ ಅವಧೂತರು ...

Klive Special Aerticle ದಾವಣಗೆರೆಯ ಸಮೀಪದ ಆನಗೋಡಿನಿಂದ ಸುಮಾರು 3 ಕಿ.ಮೀ...

ವಾಡಿಕೆಗಿಂತ ಕಡಿಮೆ ಮಳೆ ರೈತರು ಕೃಷಿ ಇಲಾಖೆ ಸೂಚಿಸಿದ ವ್ಯವಸಾಯ ಪದ್ಧತಿ ಅನುಸರಿಸಿ : ಗಿರಿಜಾ ಪಟ್ಟಣಶೆಟ್ಟಿ

ಶಿವಮೊಗ್ಗ ತಾಲ್ಲೂಕಿನಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂದ ಕಡಿಮೆ ಮಳೆಯಾಗಿರುವುದಲ್ಲದೇ,...