Friday, September 11, 2026
Friday, September 11, 2026

ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದಿಂದ ಉದ್ಯಮಶೀಲತಾ ಮಾಹಿತಿ ತರಬೇತಿ ಶಿಬಿರ

Date:

ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗಾಗಿ ಜುಲೈ 18 ರಂದು ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಧಾರವಾಡ ಮತ್ತು ಶಿವಮೊಗ್ಗದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಜಿಲ್ಲಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಜುಲೈ 18 ರಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಜಿಲ್ಲಾ ಸಮಿತಿ, ಶೇಖ್ ಮಂಜಿಲ್, ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು, ಕಿಣಿ ಲೇಔಟ್, ಶಿವಮೊಗ್ಗ ಇಲ್ಲಿ ತರಬೇತಿ ನಡೆಯಲಿದ್ದು ಕನಿಷ್ಠ 18 ವರ್ಷದ ವಯಸ್ಸಾದ ಹಾಗೂ ಓದುವ/ಬರೆಯುವ ಜ್ಞಾನವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳೆಯರಿಗೆ ವಿಶೇಷ ಪ್ರೇರೇಪಣೆ ನೀಡಲಾಗುವುದು. ಇದರೊಂದಿಗೆ ಸರ್ಕಾರ ಹಾಗೂ ವಿವಿಧ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಮತ್ತು ಪ್ರೋತ್ಸಾಹ ಧನದ ಮಾಹಿತಿ,
ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವ ಸುಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗಳ ವಿವರಗಳನ್ನು ನೀಡಲಾಗುವುದು.

ಶಿವಮೊಗ್ಗ ಜಿಲ್ಲೆಯ ಸ್ವಯಂ ಉದ್ಯೋಗಾಕಾಂಕ್ಷಿಗಳು ಈ ಉಚಿತ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಕಛೇರಿ ವೇಳೆಯಲ್ಲಿ ಉಪ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೇಕ್ಸ್, ನೆಹರು ರಸ್ತೆ, ಶಿವಮೊಗ್ಗ, ದೂರವಾಣಿ ಸಂಖ್ಯೆ: 9448812974
ಶಿವಾನಂದ ಎಲಿಗಾರ್ , ಉಪ ನಿರ್ದೇಶಕರು, ಸಿಡಾಕ್ : 9164811887,
ಅವಿನಾಶ್ ಎ. ,ತರಬೇತಿದಾರರು, ಸಿಡಾಕ್ ಇವರನ್ನು‌ ಸಂಪರ್ಕಿಸಬಹುದೆಂದು ಸಿಡಾಕ್ ಉಪನಿರ್ದೇಶಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...