ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಉದ್ದೇಶಿಸಿದೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಉತ್ತೀರ್ಣರಾಗಿರುವ ಶಿವಮೊಗ್ಗ ನಗರ ಪ್ರದೇಶದ ಯಾವುದೇ ಸಮುದಾಯದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು, ತಮ್ಮ ಹೆಸರು, ವಿಳಾಸ, ಅಂಕಪಟ್ಟಿ, ಮತ್ತಿತರ ವಿವರಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಅಧ್ಯಕ್ಷರು/ಕಾರ್ಯದರ್ಶಿ, ರಾಜ್ಯ ಸರ್ಕಾರಿ ನೌಕರರ ಸಂಘ, ಡಿ.ಸಿ.ಕಾಂಪೌಂಡ್, ಶಿವಮೊಗ್ಗ ವಿಳಾಸಕ್ಕೆ ಜುಲೈ 20ರೊಳಗಾಗಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಕಟಣೆ: ಪ್ರತಿಭಾ ಪುರಸ್ಕಾರಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Date:
