ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿವಿಧ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
18ರಿಂದ 49 ವರ್ಷದೊಳಗಿನ, ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರುವ ಗ್ರಾಮೀಣ ಪ್ರದೇಶದ ಬಿಪಿಎಲ್ ಕಾರ್ಡ್ ಹೊಂದಿರುವ ನಿರುದ್ಯೋಗಿ ಯುವಕ-ಯುವತಿಯರು ಈ ತರಬೇತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪೂರ್ಣಗೊಂಡ ಬಳಿಕ ಸ್ವ-ಉದ್ಯೋಗ ಆರಂಭಿಸುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಸಂಸ್ಥೆಯಲ್ಲಿ ತರಬೇತಿ ಪಡೆಯುವವರಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗಿದ್ದು, ಸಂಸ್ಥೆಯಲ್ಲಿಯೇ ವಾಸ್ತವ್ಯ ಹೂಡುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಜುಲೈ 23ರಿಂದ 10 ದಿನಗಳ ಅವಧಿಯ ಅಣಬೆ ಬೇಸಾಯ ತರಬೇತಿ ಹಾಗೂ ಜುಲೈ 29ರಿಂದ 35 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ ಆರಂಭವಾಗಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಹಾಗೂ ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು – 577216, ಶಿವಮೊಗ್ಗ ತಾಲ್ಲೂಕು ಇವರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 94819 55721, 97434 29595, 91644 11580, 94493 71579 ಹಾಗೂ 96329 61707 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
