Thursday, September 10, 2026
Thursday, September 10, 2026

ಇರುವಕ್ಕಿಯ ಕೃಷಿ ವಿವಿಯಲ್ಲಿ “ಮೀನು ಕೃಷಿ” ಕುರಿತು ಕಾರ್ಯಾಗಾರ, ಮೊದಲ ಐವತ್ತು ಕೃಷಿಕರಿಗೆ ಆದ್ಯತೆ, ಉಚಿತ ಪ್ರವೇಶ

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಶಿವಮೊಗ್ಗ), ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಹಾಗೂ ರಾಷ್ಟ್ರೀಯ ಮೀನುಗಾರರ ಸಂಘ, ಕರ್ನಾಟಕ ಇವರ ಸಹಯೋಗದಲ್ಲಿ “ಮೀನು ಕೃಷಿ”
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 21.07.2026 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಈ ತರಬೇತಿ ಕಾರ್ಯಕ್ರಮವು ಉಚಿತವಾಗಿದ್ದು, ಮೊದಲು ನೋಂದಾಯಿಸಿದ 50 ರೈತರಿಗೆ ಆದ್ಯತೆ ನೀಡಲಾಗುವುದು. ಈ ತರಬೇತಿ ಕಾರ್ಯಕ್ರಮಕ್ಕೆ ಹೆಸರು ಮತ್ತು ವಿಳಾಸವನ್ನು ನೋಂದಾಯಿಸಿದ ರೈತರಿಗೆ ಮಾತ್ರ ಅವಕಾಶ ನೀಡಲಾಗುವುದು. ರೈತರ ತರಬೇತಿ ಸಂಸ್ಥೆ ಇರುವಕ್ಕಿಯ ವಾಟ್ಸಪ್ ಗ್ರೂಪಿನಲ್ಲಿರುವ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ತಮ್ಮ ಹೆಸರನ್ನು ಇದೆ ಗ್ರೂಪಿನಲ್ಲಿ ನೋಂದಾಯಿಸಿರಿ . ಇತರೆ ರೈತರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ವ್ಯಾಟ್ಸಪ್ ಸಂದೇಶದ ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9483162891 /9958324261/ 8618715599

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...