Thursday, September 10, 2026
Thursday, September 10, 2026

D.K. Shivakumar ಬರದ ಬಿಕ್ಕಟ್ಟು: ರಾಜ್ಯದ ಯಾವುದೇ ಒಬ್ಬ ನಾಗರಿಕ ಅಥವಾ ಮೂಕ ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ- ಡಿ.ಕೆ.ಶಿವಕುಮಾರ್

Date:

D.K. Shivakumar ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು.

ನೈಋತ್ಯ ಮುಂಗಾರು ನಮಗೆ ತೀವ್ರವಾಗಿ ಕೈಕೊಟ್ಟಿದೆ. ಪ್ರಸ್ತುತ ಮುಂಗಾರು ಬಿತ್ತನೆ ಗುರಿಯು ಕೇವಲ ಶೇಕಡಾ 34 ರಷ್ಟು ಮಾತ್ರ ತಲುಪಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ವ್ಯಾಪಕ ಬೆಳೆ ಹಾನಿಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹವು ಶೇಕಡಾ 34 ರಷ್ಟಕ್ಕೆ ಕುಸಿದಿದ್ದು, ಅಂತರ್ಜಲ ಮಟ್ಟವೂ ಸಹ ತೀವ್ರವಾಗಿ ಆಳಕ್ಕೆ ಕುಸಿಯುತ್ತಿದೆ ಎಂದರು.

ರಾಜ್ಯದ ಯಾವುದೇ ಒಬ್ಬ ನಾಗರಿಕನಿಗೆ ಅಥವಾ ಮೂಕ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪರಮೋಚ್ಚ ಕರ್ತವ್ಯವಾಗಿದೆ. ಇಡೀ ಆಡಳಿತ ಯಂತ್ರವು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ನಿಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಲೋಪದೋಷಗಳಾದರೆ ಅದಕ್ಕೆ ನೇರವಾಗಿ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.
ತುರ್ತು ಬರ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರದಲ್ಲಿ ಹಣದ ಕೊರತೆಯೇ ಇಲ್ಲ. ನಿಮ್ಮ ಜಿಲ್ಲೆಗಳಿಗೆ ಅಗತ್ಯವಿರುವ ಹಣವನ್ನೂ ಕೊಟ್ಟಿದ್ದೇವೆ ಮತ್ತು ನಿರ್ಣಯ ಕೈಗೊಳ್ಳುವ ಅಧಿಕಾರವನ್ನೂ ನೀಡಿದ್ದೇವೆ. ಹಾಗಾಗಿ ಯಾವುದೇ ನೆಪವಿಲ್ಲದೇ, ತಳಮಟ್ಟದಲ್ಲಿ ಕೆಲಸದ ಪ್ರತ್ಯಕ್ಷ ರಿಸಲ್ಟ್‌ಗಳು ಮಾತ್ರ ಬೇಕು. ಎಲ್ಲಾ ಪರಿಹಾರ ಕ್ರಮಗಳಲ್ಲಿ ಶೇ. 100 ರಷ್ಟು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಬರ ಪರಿಸ್ಥಿತಿಯ ವೈಜ್ಞಾನಿಕ ಅಧ್ಯಯನಕ್ಕಾಗಿ ಕೇಂದ್ರದ ತಂಡವನ್ನು ತಕ್ಷಣವೇ ಕಳುಹಿಸುವಂತೆ ಮತ್ತು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಪೂರ್ಣ ವಿವರಗಳನ್ನು ‘ಫ್ರೂಟ್ಸ್’ (FRUITS) ತಂತ್ರಾಂಶದ ಮೂಲಕ ಸಿದ್ಧವಾಗಿಟ್ಟುಕೊಂಡು, ಪ್ರತಿಯೊಂದು ಪರಿಹಾರವೂ ತಳಮಟ್ಟದ ಅರ್ಹ ಫಲಾನುಭವಿಗೆ ತಲುಪುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಥವಾ ತಾಂತ್ರಿಕ ಲೋಪದಿಂದ ಯಾವುದೇ ಒಬ್ಬ ರೈತನಿಗೆ ಬೆಳೆವಿಮೆ ಸಿಗದೆ ಇರುವುದು ಅಥವಾ ಪರಿಹಾರ ವಂಚಿತವಾಗುವ ಸ್ಥಿತಿ ಉದ್ಭವಿಸಲೇಬಾರದು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆವಿಮೆ ಮಾಡಿಸುವಂತೆ ಪ್ರೇರೇಪಿಸಿ ಹಾಗೂ ಬೆಳೆಹಾನಿ ಸಮೀಕ್ಷೆಯನ್ನು ನಿಯಮಾನುಸಾರ ತಕ್ಷಣವೇ ಪೂರ್ಣಗೊಳಿಸಿ ಎಂದು ಹೇಳಿದರು.

ನಮ್ಮ ಮೊದಲ ಮತ್ತು ಪ್ರಧಾನ ಆದ್ಯತೆ ಕುಡಿಯುವ ನೀರು. ರಾಜ್ಯದ ಯಾವುದೇ ಹಳ್ಳಿ ಅಥವಾ ನಗರದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಳ್ಳಬಾರದು. ಸ್ಥಳೀಯ ನೀರಿನ ಮೂಲಗಳಿಲ್ಲದಿದ್ದರೆ, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ತಕ್ಷಣವೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ. ಆದರೆ, ನೀರು ಸರಬರಾಜು ಮಾಡುವ ಮುನ್ನ ಕಡ್ಡಾಯವಾಗಿ ಅದರ ಗುಣಮಟ್ಟ ತಪಾಸಣೆ ನಡೆಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ತೀವ್ರ ಮುನ್ನೆಚ್ಚರಿಕೆ ವಹಿಸಿ. ಅಸ್ತಿತ್ವದಲ್ಲಿರುವ ಜಲಮೂಲಗಳು ಕಲುಷಿತವಾಗದಂತೆ ರಕ್ಷಿಸಿ ಮತ್ತು ಮಳೆನೀರು ಎಲ್ಲೂ ಪೋಲಾಗದಂತೆ ತಡೆಯಲು ಸಾರ್ವಜನಿಕರಲ್ಲಿ ಮಳೆನೀರು ಕೊಯ್ಲಿನ ಕುರಿತು ಜಾಗೃತಿ ಮೂಡಿಸಿ ಎಂದರು.

D.K. Shivakumar ಮಾನವರಷ್ಟೇ ಅಲ್ಲದೆ, ಜಾನುವಾರುಗಳ ಸಂರಕ್ಷಣೆಯೂ ಅಷ್ಟೇ ಮುಖ್ಯ. ಅಗತ್ಯವಿರುವ ಕಡೆಗಳಲ್ಲೆಲ್ಲ ತಕ್ಷಣವೇ ಮೇವಿನ ಬ್ಯಾಂಕ್‌ಗಳು ಹಾಗೂ ಗೋಶಾಲೆಗಳನ್ನು ತೆರೆಯಿರಿ. ಹಸಿವು ಮತ್ತು ನೀರಡಿಕೆಯಿಂದ ರಾಜ್ಯದಲ್ಲಿ ಒಂದೇ ಒಂದು ಜಾನುವಾರು ಕೂಡ ಸಾಯಬಾರದು.
ಸರ್ಕಾರದ ಎಲ್ಲಾ ಪರಿಹಾರ ಕ್ರಮಗಳು ಜನರನ್ನು ನೇರವಾಗಿ ತಲುಪಬೇಕು. ಬರದ ತೀವ್ರತೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟದ ಹಾಗೆ ಅವರನ್ನು ಆಡಳಿತ ಯಂತ್ರವು ಕೈಹಿಡಿಯಬೇಕು. ತಳಮಟ್ಟದಲ್ಲಿ ಆಡಳಿತ ಕಾರ್ಯವೈಖರಿ ಚುರುಕಾಗಬೇಕು ಎಂದು ತಿಳಿಸಿದರು.

ಈ ವಿಡಿಯೋ ಸಂವಾದ ಸಭೆಯಲ್ಲಿ, ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಸಚಿವರಾದ ಶ್ರೀ ರಾಮಲಿಂಗರೆಡ್ಡಿ, ಶ್ರೀ ಕೆ.ಜೆ. ಜಾರ್ಜ್, ಶ್ರೀ ಈಶ್ವರ್ ಖಂಡ್ರೆ, ಶ್ರೀ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...