Thursday, September 10, 2026
Thursday, September 10, 2026

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

Date:

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
2024ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬರು, 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಮತಿ ಪುಷ್ಪಾ ಅವರು ಪ್ರಕರಣದ ಸಮಗ್ರ ತನಿಖೆ ಪೂರ್ಣಗೊಳಿಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು.
ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ 03 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ ₹50,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...