ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಜುಲೈ 24, 2026ರ ಶುಕ್ರವಾರ ಸಂಜೆ 5.30ಕ್ಕೆ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿದುಷಿ, ಲೇಖಕಿ, ವಾಗ್ಮೀನಿ ಹಾಗೂ ವಿಭು ಅಕಾಡೆಮಿ, ಬೆಂಗಳೂರು ಸಂಸ್ಥೆಯ ಮುಖ್ಯಸ್ಥರಾದ ಡಾ. ಆರತಿ ವಿ.ಬಿ. ಅವರು ‘ದೇವುಡು ನರಸಿಂಹಶಾಸ್ತ್ರಿ ಅವರ “ಮಹಾದರ್ಶನ”: ಒಂದು ಅವಲೋಕನ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
