ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ಕೈಗೊಂಡು, ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್, ಗೌರಿಬಿದನೂರು ಶಾಸಕರಾದ ಕೆ.ಹೆಚ್.ಪುಟ್ಟಸ್ವಾಮಿಗೌಡ ಅವರು, ಚಿಕ್ಕಾಬಳ್ಳಾಪುರ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎನ್.ಮಂಜುಳಾ, ರಾಜ್ಯ ವಿಪತ್ತು ನಿರ್ವಹಣೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಸಿಇಒ ನವೀನ್ ಭಟ್ ಹಾಗೂ ಮುಂತಾದವರು ಇದ್ದರು.
