Tuesday, July 28, 2026
Tuesday, July 28, 2026

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಮೆರಿಟ್ ಹಾಗೂ ರೋಸ್ಟರ್ ಪ್ರಕಾರ ಉಳಿದಿರುವ ಡಿಪಲ್ಒಮಾ ಪ್ರಥಮ ಸೆಮಿಸ್ಟರ್ ಪ್ರವೇಶಾತಿಗೆ ಪ್ರಕಟಣೆ

Date:

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದ್ದು, ಉಳಿದಿರುವ ಸೀಟು ಹಂಚಿಕೆಗಾಗಿ ಅರ್ಜಿ ಸಲ್ಲಿಸಲು ಜು.31 ಕಡೆಯ ದಿನವಾಗಿದೆ.
ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ -05 ಸೀಟುಗಳು, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್- 01, ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್) -04 ಸೀಟುಗಳು ಲಭ್ಯವಿರುತ್ತದೆ.
ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕನ್ನಡ ಮಾಧ್ಯಮ/ಗ್ರಾಮೀಣ ಅಭ್ಯರ್ಥಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ 06 ಭಾವಚಿತ್ರಗಳನ್ನು ಸಲ್ಲಿಸಬೇಕು.
ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ,- ಮೊ.ಸಂ: 7975155925ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....