Tuesday, July 28, 2026
Tuesday, July 28, 2026

ರಸ್ತೆ ಸಂಪರ್ಕಕ್ಕಾಗಿ ಗ್ರಾಮಸ್ಥರು ಮತ್ತು ಶಾಲಾಮಕ್ಕಳಿಂದ ಪ್ರತಿಭಟನೆ

Date:

 ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇಮನೆ ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲದ ಕಾರಣ ವಾಹನ ಸಂಚಾರ ಸಂಪೂರ್ಣ ದುಸ್ತರವಾಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಂತ್ಲಾ ಗ್ರಾಮದವರೆಗೆ ಖಾಸಗಿ ಜಮೀನು ಇರುವ ಕಾರಣ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಆದರೆ ಅಲ್ಲಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಕಡೇಮನೆ ಗ್ರಾಮಕ್ಕೆ ಇದುವರೆಗೆ ಯಾವುದೇ ರಸ್ತೆ ನಿರ್ಮಿಸಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿದಿನ ಶಾಲೆಗೆ ತೆರಳಲು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಕ್ಕಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದರು.

ಪ್ರತಿಭಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....