Thursday, September 17, 2026
Thursday, September 17, 2026

Sagara Gangothri College of Education ಕುವೆಂಪು ವಿವಿ ಮಾನ್ಯತೆ ಇಲ್ಲ: ಸಾಗರದ ಬಿಎಡ್.ಕಾಲೇಜಿನ ವಿದ್ಯಾರ್ಥಿವೃಂದದ ಪ್ರತಿಭಟನೆ

Date:

Sagara Gangothri College of Education ಸಾಗರದ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿ.ಎಡ್. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸರ್ಕಾರಿ ಸೀಟು ಪಡೆದು ಕಾಲೇಜಿಗೆ ದಾಖಲಾಗಿದ್ದರೂ ಮೂಲಭೂತ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಿ.ಎಡ್. ಕೋರ್ಸ್‌ಗೆ ದಾಖಲಾಗಿ ಆರು ತಿಂಗಳು ಕಳೆದರೂ ವಿದ್ಯಾರ್ಥಿ ನೋಂದಣಿ ಸಂಖ್ಯೆ (ಯುಜಿ ನಂಬರ್) ನೀಡಿಲ್ಲ. ಅಲ್ಲದೆ, ಕುವೆಂಪು ವಿಶ್ವವಿದ್ಯಾಲಯದಿಂದ ಕೋರ್ಸ್‌ಗೆ ಮಾನ್ಯತೆ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಅದಕ್ಕೆ ತಕ್ಕ ಸೌಲಭ್ಯಗಳನ್ನು ಕಾಲೇಜು ಒದಗಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆಯ ದಿನಾಂಕ ಸಮೀಪಿಸುತ್ತಿದ್ದರೂ ಯುಜಿ ನಂಬರ್ ನೀಡದಿರುವುದರಿಂದ ತಮ್ಮ ಭವಿಷ್ಯ ಆತಂಕಕ್ಕೆ ಸಿಲುಕಿದೆ ಎಂದು ಹೇಳಿದರು.

Sagara Gangothri College of Education ಪ್ರತಿಭಟನೆ ವೇಳೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರ ನಡುವೆ ತೀವ್ರ ವಾದ-ವಿವಾದ ನಡೆಯಿತು. ಪರೀಕ್ಷೆಯನ್ನು ಮುಂದೂಡಿ ಮೊದಲು ಯುಜಿ ನಂಬರ್ ನೀಡಬೇಕು. ಒಂದು ವೇಳೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗದಿದ್ದರೆ ತಮ್ಮನ್ನು ಬೇರೆ ಕಾಲೇಜಿಗೆ ವರ್ಗಾವಣೆ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಧ್ಯಪ್ರವೇಶಿಸಿದರು. ಬಳಿಕ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...