Monday, August 17, 2026
Monday, August 17, 2026

District Consumer Disputes Redressal Commission ಕಾನೂನುಬಾಹಿರವಾಗಿ ಜೆಸಿಬಿ ಜಪ್ತಿ : ಫೈನಾನ್ಸ್ ಕಂಪನಿಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ

Date:

District Consumer Disputes Redressal Commission ಯಾವುದೇ ಪೂರ್ವ ನೋಟೀಸ್ ನೀಡದೆ ಕಾನೂನುಬಾಹಿರವಾಗಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದ ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೂಕ್ತ ಆದೇಶ ಹಾಗೂ ದಂಡ ವಿಧಿಸಿದೆ.
ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮಂಜಪ್ಪ ಕೆ. ಎಂಬುವರು ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್‌ನಿಂದ ರೂ.31,67,455/- ಸಾಲ ಪಡೆದು ಜೆಸಿಬಿ ಖರೀದಿಸಿದ್ದರು. ಪ್ರತಿ ತಿಂಗಳು ರೂ.71,500/- ಕಂತು ಪಾವತಿಸಬೇಕಿದ್ದು, ಪ್ರತಿ ತಿಂಗಳೂ ಸರಿಯಾಗಿ ಪಾವತಿಸುತ್ತಿದ್ದರು. ಆದರೆ, ಅಧಿಕ ಮಳೆ ಹಾಗೂ ಜೆಸಿಬಿ ರಿಪೇರಿ ಕಾರಣದಿಂದ 3 ತಿಂಗಳ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ.
ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ, 2025ರ ಆಗಸ್ಟ್ 6ರಂದು ಫೈನಾನ್ಸ್ ಸಂಸ್ಥೆಯವರು ಬಲವಂತವಾಗಿ ಜೆಸಿಬಿ ಯನ್ನು ವಶಪಡಿಸಿಕೊಂಡಿದ್ದರು. ನಂತರ ದೂರುದಾರರು ರೂ.1,00,000/- ಹಣ ಪಾವತಿಸಿ ಯಂತ್ರವನ್ನು ಹಿಂತಿರುಗಿಸುವಂತೆ ಕೋರಿದರೂ ಫೈನಾನ್ಸ್‌ನವರು ಸಂಪೂರ್ಣ ಸಾಲದ ಮೊತ್ತ ಪಾವತಿಸುವಂತೆ ಪಟ್ಟು ಹಿಡಿದಿದ್ದರು. ಇದರಿಂದ ನೊಂದ ದೂರುದಾರರು ವಕೀಲರ ಮೂಲಕ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ತೀರ್ಪು:
District Consumer Disputes Redressal Commission ದೂರುದಾರರು ಮತ್ತು ಎದುರುದಾರರ ವಾದ-ವಿವಾದಗಳನ್ನು ಆಲಿಸಿದ ಜಿಲ್ಲಾ ಗ್ರಾಹಕರ ಆಯೋಗವು, ಆರ್‌ಬಿಐ ನಿಯಮಗಳು ಹಾಗೂ ಉಚ್ಚ ನ್ಯಾಯಾಲಯ/ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಫೈನಾನ್ಸ್ ಕಂಪನಿಯು ಸೇವಾ ನ್ಯೂನ್ಯತೆ ಎಸಗಿದೆ ಎಂದು ತೀರ್ಮಾನಿಸಿದೆ.
ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ಆದೇಶವಾದ 45 ದಿನಗಳ ಒಳಗೆ ಫೈನಾನ್ಸ್ ಕಂಪನಿಯು ದೂರುದಾರರಿಗೆ ಜೆಸಿಬಿ ಯನ್ನು ಹಿಂತಿರುಗಿಸಬೇಕು.
45 ದಿನಗಳ ನಂತರ ಜೆಸಿಬಿ ನೀಡುವವರೆಗೆ, ವಿಳಂಬವಾಗುವ ಪ್ರತಿದಿನಕ್ಕೆ ರೂ.2,000/- ಗಳಂತೆ ದೂರುದಾರರಿಗೆ ಪಾವತಿಸಬೇಕು.
ದೂರುದಾರರಿಗೆ ಆದ ನಷ್ಟಕ್ಕೆ ಪರಿಹಾರವಾಗಿ ರೂ.10,000/- ಹಾಗೂ ದೂರಿನ ವೆಚ್ಚವನ್ನು 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ನೀಡಬೇಕಾಗುತ್ತದೆ ಎಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...