Monday, August 17, 2026
Monday, August 17, 2026

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Date:

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ಒಂದು ಒಂದು ಸೇವಾ ಸಂಸ್ಥೆಯಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಅಧ್ಯಕ್ಷ ಶೇಷಗಿರಿ ಡಿ.ಕೆ. ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಎಜುಕೆಷನ್ ಅಂಡ್ ಚಾರಿಟಬಲ್ ಟ್ರಸ್ಟ್ (ರಿ) ರೋಟರಿ ಪೂರ್ವ ಇಂಗ್ಲೀಷ್ ಹೈಸ್ಕೂಲ್, ರಾಜೇಂದ್ರ ನಗರ, ಶಿವಮೊಗ್ಗ ಇವರು ಏರ್ಪಡಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ 2026-27 ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ರೋಟರಿ ಇಂಟರಾಕ್ಟ್ ಕ್ಲಬ್ ಒಂದು ಸೇವಾ ಸಂಸ್ಥೆಯಾಗಿದ್ದು, ಇದು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶಗಳನ್ನು ಒದಗಿಸುತ್ತದೆ ಎಂದರು.

ಇಂಟರಾಕ್ಟ್ ಕ್ಲಬ್ ಮಹತ್ವದ ಬಗ್ಗೆ ವಿವರಿಸುತ್ತಾ ಇದರ ಮುಖಾಂತರ ನೀವುಗಳು ನಾಯಕತ್ವ ಕೌಶಲ್ಯಗಳನ್ನು ಬೆಳೆಸಬಹುದು, ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು, ಇದು ಕೇವಲ ಕ್ಲಬ್ ಅಲ್ಲ-ಇದು ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ಇಂಟರಾಕ್ಟ್ ಕ್ಲಬ್ ಎಂಬುದು 12 ರಿಂದ 18 ವರ್ಷ ವಯಸ್ಸಿನ ಯುವಕರಿಗಾಗಿ ಸ್ಥಳೀಯ ರೋಟರಿ ಕ್ಲಬ್ ಗಳಿಂದ ಪ್ರಾಯೋಜಿಸಲ್ಪಟ್ಟ ಒಂದು ಸೇವಾ ಮತ್ತು ನಾಯಕತ್ವ ಸಂಸ್ಥೆಯಾಗಿದೆ. ಈ ಕ್ಲಬ್ ಗಳು ಸ್ವ-ಆಡಳಿತ ನಡೆಸುತ್ತಿದ್ದು, ವಾರ್ಷಿಕವಾಗಿ ಕನಿಷ್ಠ ಎರಡು ಪ್ರಮುಖ ಸೇವಾ ಯೋಜನೆಗಳನ್ನು ಕಾರ್ಯಗತಗೊಳಿಸುತ್ತವೆ. ಒಂದು ಅವರ ಸ್ಥಳೀಯ ಸಮುದಾಯಕ್ಕೆ ಪ್ರಯೋಜನಕಾರಿ ಮತ್ತು ಇನ್ನೊಂದು ಅಂತರರಾಷ್ಟ್ರೀಯ ತಿಳುವಳಿಕೆಯನ್ನು ಉತ್ತೇಜಿಸುತ್ತದೆ. ಯೋಜನೆಗಳು ಸಾಮಾನ್ಯವಾಗಿ ಶಿಕ್ಷಣ, ಪರಿಸರ ಸುಸ್ಥಿರತೆ ಮತ್ತು ಸಾರ್ವಜನಿಕ ಆರೋಗ್ಯದಂತಹ ಸ್ಥಳೀಯ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತವೆ ಎಂದು ಅಭಿಮತ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಕಾರ್ಯದರ್ಶಿಯಾದ ಆರ್.ಮನೋಹರ ಮಾತನಾಡಿ, ಈ ಕಾರ್ಯಕ್ರಮವು ರೋಟರಿಯ ಧ್ಯೇಯವಾಕ್ಯವಾದ “ಸ್ವಯಂ ಸೇವೆಗಿಂತ ಮೇಲ್ಪಟ್ಟು ಸೇವೆ”ಯನ್ನು ಆಧರಿಸಿದೆ. ಇದು ಶಾಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸಮಗ್ರತೆ, ವೈಯಕ್ತಿಕ ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದ ಬಗ್ಗೆ ಕಲಿಸುತ್ತದೆ. ಈ ಇಂಟರಾಕ್ಟ್ ಕ್ಲಬ್ ವೇದಿಕೆಯನ್ನು ರೂಪಿಸಿರುವ ಶಾಲೆಯ ಎಲ್ಲಾ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಸಿಬ್ಬಂದಿಗೆ, ಹಾಗೂ ರೋಟರಿ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.

Rotary Club of Shivamogga ಈ ಸಂದಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಡಿಕ್ಷನರಿ, ಪೆನ್, ನೋಟ್ ಬುಕ್ ಅನ್ನು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ನ ವತಿಯಿಂದ ಪದಾಧಿಕಾರಿಗಳು ವಿತರಿಸಿದರು.

ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ್, ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಶಾಲಾ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...