S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಬಡಾವಣೆಗಳಲ್ಲೂ ನಾಗರಿಕರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಸುಸಜ್ಜಿತ ನೈರ್ಮಲ್ಯ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಮುಖ್ಯ ಕರ್ತವ್ಯವಾಗಿದೆ,” ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಇಂದು ಶಿವಮೊಗ್ಗ ನಗರದ ಸೂರ್ಯ ಬಡಾವಣೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ನೂತನ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ (ಯುಜಿಡಿ) ಕಾಮಗಾರಿಗಳಿಗೆ ಮಾನ್ಯ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಡಾವಣೆಯ ನಿವಾಸಿಗಳಿಗೆ ಎದುರಾಗುತ್ತಿದ್ದ ಸಂಚಾರ ಮತ್ತು ಒಳಚರಂಡಿ ಸಮಸ್ಯೆಗೆ ಈ ಯೋಜನೆಯ ಮೂಲಕ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಯ ಸ್ಥಳದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಮತ್ತು ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಂಜಿನಿಯರ್‌ಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
S. N. Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀಮತಿ ಆಶಾ ಚಂದ್ರಪ್ಪ, ಶ್ರೀ ಚಂದ್ರಪ್ಪ, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಾಜು, ಬಡಾವಣೆಯ ನಿವಾಸಿಗಳು, ಸ್ಥಳೀಯ ಪ್ರಮುಖರು, ಮುಖಂಡರು ಹಾಗೂ ಪಕ್ಷದ ಸಕ್ರಿಯ ಕಾರ್ಯಕರ್ತ ಬಾಂಧವರು ಉಪಸ್ಥಿತರಿದ್ದರು.
