Wednesday, September 16, 2026
Wednesday, September 16, 2026

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

Date:

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ ಬದಲಾಯಿಸಲಿರುವ ಶಿವಮೊಗ್ಗ – ತುಮಕೂರು ಎನ್‌ಎಚ್-69 (ಹಳೆಯ ಎನ್‌ಎಚ್-206) ರಾಷ್ಟ್ರೀಯ ಹೆದ್ದಾರಿಯ 4 ಪಥಗಳ ವಿಸ್ತರಣೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಒಟ್ಟು ಸುಮಾರು 6,400 ಕೋಟಿ ರೂ. ಅಂದಾಜು ವೆಚ್ಚದ, 214.43 ಕಿ.ಮೀ ಉದ್ದದ ಈ ಬೃಹತ್ ಯೋಜನೆಯಲ್ಲಿ ಈಗಾಗಲೇ 197.42 ಕಿ.ಮೀ ಗೂ ಹೆಚ್ಚಿನ ಕಾಮಗಾರಿ ಮುಗಿದಿದ್ದು, ಯೋಜನೆಯ ನಾಲ್ಕು ಹಂತಗಳ ಪೈಕಿ ಮೂರು ಹಂತಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ 2027ರ ವೇಳೆಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಯೋಜನೆ ಕುರಿತಂತೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ.

ಮಲ್ಲಸಂದ್ರದಿಂದ ಕರಡಿವರೆಗಿನ (52.89 ಕಿ.ಮೀ) ಮೊದಲ ಹಂತ ಶೇ.100 ರಷ್ಟು ಪೂರ್ಣಗೊಂಡಿದ್ದರೆ, ಕರಡಿಯಿಂದ ಬಾಣಾವರ (56.70 ಕಿ.ಮೀ) ಮತ್ತು ಬಾಣಾವರದಿಂದ ಬೆಟ್ಟದಹಳ್ಳಿ (48.51 ಕಿ.ಮೀ) ಭಾಗದ ಕಾಮಗಾರಿಗಳು ಶೇ.98 ಕ್ಕಿಂತ ಹೆಚ್ಚು ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಿವೆ. ಬೆಟ್ಟದಹಳ್ಳಿಯಿಂದ ಶಿವಮೊಗ್ಗದವರೆಗಿನ ಕೊನೆಯ ಹಂತದ 56.33 ಕಿ.ಮೀ ಕಾಮಗಾರಿಯೂ ಈಗಾಗಲೇ ಶೇ.83.78 ರಷ್ಟು ಭೌತಿಕ ಪ್ರಗತಿ ಸಾಧಿಸಿದ್ದು, ಮಾರ್ಚ್ 2027 ರ ವೇಳೆಗೆ ಸಂಪೂರ್ಣ ಮುಕ್ತಾಯಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಸಿಗಲಿದೆ.

B.Y. Raghavendra ಈ ಬೃಹತ್ ಹೆದ್ದಾರಿ ಯೋಜನೆಯ ಪ್ರಾರಂಭದಿಂದಲೂ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ತಮ್ಮ ಸತತ ಪರಿಶ್ರಮವನ್ನು ಮುಂದುವರಿಸಿಕೊಂಡೇ ಬರುತ್ತಿರುವ ಸಂಸದ ರಾಘವೇಂದ್ರ, “ಶಿವಮೊಗ್ಗ ಜಿಲ್ಲೆಯ ನಾಗರಿಕರ ದಶಕಗಳ ಕನಸಾಗಿದ್ದ ಈ ಹೆದ್ದಾರಿ ಅಗಲೀಕರಣಕ್ಕೆ 6,400 ಕೋಟಿ ರೂ.ಗಳಿಗೂ ಅಧಿಕ ಅನುದಾನ ನೀಡಿ ಯೋಜನೆಯನ್ನು ಕ್ಷಿಪ್ರಗತಿಯಲ್ಲಿ ಸಾಕಾರಗೊಳಿಸುತ್ತಿರುವ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇನ್ನು ಕೆಲವೇ ತಿಂಗಳುಗಳಲ್ಲಿ ಸಂಪೂರ್ಣ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ಬಾಕಿ ಇರುವ ಸ್ಥಳೀಯ ಭೂಸ್ವಾಧೀನ ಹಾಗೂ ಉಪಯುಕ್ತತೆಗಳ (utility shifting) ವರ್ಗಾವಣೆಗೆ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ಪೂರ್ಣ ಪ್ರಮಾಣದ ಸಹಕಾರ ನೀಡಬೇಕು ಎಂದು ಮತ್ತೊಮ್ಮೆ ಒತ್ತಾಯಿಸುತ್ತೇನೆ. ಈ ಮೂಲಕ ಕಾಮಗಾರಿಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಬೆಂಬಲಿಸಬೇಕು,” ಎಂದು ಹೇಳಿದ್ದು, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...