Wednesday, September 16, 2026
Wednesday, September 16, 2026

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Date:

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಶೆಡ್ ನಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಂಭೀರ ಗಾಯಗೊಂಡಿರುವ ವಿಚಾರ ತಿಳಿದು ಆಘಾತವಾಯಿತು. ಕೂಲಿ ಅರಸಿ ದೂರದ ಊರಿನಿಂದ ಬಂದು ನೆಲೆಸಿದ್ದ ಬಡಕುಟುಂಬವೊಂದು ಹೀಗೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ.

ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಪರಿಹಾರ ಕಾರ್ಯ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ.

Breaking News ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬದವರ ಜೊತೆ ಸರ್ಕಾರ ನಿಲ್ಲಲಿದೆ ಎಂದು ಉಪಮುಖ್ಯಮಂತ್ರಿಗಳೂ ಹಾಗು ರಾಜ್ಯದ ಕಂದಾಯ ಇಲಾಖಾ ಸಚಿವರಾಗಿರುವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...