ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು, ಕೊಪ್ಪಳ ಮೂಲದ ಮುಗ್ಧ ಮಗು ಸೇರಿದಂತೆ ಮೂವರು ದಾರುಣವಾಗಿ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ
ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ತಕ್ಷಣವೇ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿಯುವ ಅಪಾಯವಿರುವ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಸೂಕ್ತ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.
